Rain Alert: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನವೆಂಬರ್ 21 ರಿಂದ ಇದು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಇದನ್ನೂ ಓದಿ: ಮನುಷ್ಯರು 150 ವರ್ಷ ಬದುಕುವ ಮಾತ್ರೆ ಅಭಿವೃದ್ಧಿಪಡಿಸಿದ ಚೀನಾ..!
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ನಿಕೋಬಾರ್ ದ್ವೀಪದ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಅಂಡಮಾನ್ ದ್ವೀಪದಲ್ಲಿಯೂ ಭಾರೀ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬಿಗ್ ಬಾಸ್ ಮನೇಲಿ ಅಶ್ವಿನಿ ಗೌಡ ಕಣ್ಣೀರಧಾರೆ..! ಮನೆಗೆ ಹೋಗ್ತೀನಿ ಅಂತ ಪಟ್ಟು!
ಈ ಕುರಿತು ಮಾತನಾಡಿದ ಅಧಿಕಾರಿಗಳು, ನವೆಂಬರ್ 24 ಮತ್ತು 25 ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮೇಲೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ (ಗಂಟೆಗೆ 40-50 ಕಿಲೋಮೀಟರ್) ಮತ್ತು ಮಿಂಚಿನೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ತಿಳಿಸಿದ್ದಾರೆ. ನವೆಂಬರ್ 23 ರವರೆಗೆ ಅಂಡಮಾನ್ ಸಮುದ್ರಕ್ಕೆ ಹೋಗದಂತೆ ಮೀನುಗಾರರಿಗೆ ಸೂಚಿಸಲಾಗಿದ್ದು, ಜೊತೆಗೆ ಪ್ರವಾಸಿಗರು ಮತ್ತು ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸಮುದ್ರದ ಪರಿಸ್ಥಿತಿಯೂ ಪ್ರಕ್ಷುಬ್ಧವಾಗುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 40 ರಿಂದ 60 ಕಿಲೋಮೀಟರ್‌ಗಳಷ್ಟು ಹೆಚ್ಚಾಗಬಹುದು ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ: ತುಳುನಾಡಿನ ದೈವ ಕೊರಗಜ್ಜನ ಬಗ್ಗೆ ನಿಗೂಢ ಸತ್ಯಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ!
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಹಿನ್ನೆಲೆ ಕೇರಳ, ಮಾಹೆ, ಆಂಧ್ರಪ್ರದೇಶದ ಕರಾವಳಿ ಭಾಗಗಳು, ಕರ್ನಾಟಕದ ಒಳನಾಡಿನಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಚೆನ್ನೈ ಮತ್ತು ತಮಿಳುನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ. ಇನ್ನು ಭಾರತದ ಹಲವಾರು ರಾಜ್ಯಗಳಲ್ಲಿ ತೀವ್ರ ಚಳಿ ಈಗಾಗಲೇ ಶುರುವಾಗಿದೆ. ಉತ್ತರ, ಮಧ್ಯ ಮತ್ತು ಈಶಾನ್ಯ ಭಾರತ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಚಳಿಗಾಲ ತೀವ್ರಗೊಂಡಿದೆ. ಮುಂದಿನ ಏಳು ದಿನಗಳವರೆಗೆ ಮಳೆ ಮುಂದುವರಿಯಬಹುದು, ಹವಾಮಾನ ಇಲಾಖೆಯು ಹಲವಾರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ನೀವು ವಾಟ್ಸಾಪ್ ಬಳಸ್ತಿದ್ದೀರಾ..? ಹಾಗಾದ್ರೆ ಈ ಸ್ಟೋರಿ ಗಮನವಿಟ್ಟು ಓದಿ!
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











