ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕತುಳು ಟಾಕೀಸ್ಮಂಗಳೂರು

Mangaluru: ಇಂದು ವಾದಿರಾಜ ವಾಲಗ ಮಂಡಳಿ ಸಿನಿಮಾಕ್ಕೆ ಮುಹೂರ್ತ!

Mangaluru: ಮಂಗಳೂರಿನ ಉರ್ವಾ ಮಾರಿಯಮ್ಮನ ಸಾನಿಧ್ಯದಲ್ಲಿ ಇಂದು ಕನ್ನಡ ಚಲನಚಿತ್ರ “ವಾದಿರಾಜ ವಾಲಗ ಮಂಡಳಿ” ಸಿನಿಮಾಕ್ಕೆ ಮುಹೂರ್ತ ನಡೆಯಲಿದೆ ಎಂದು ಚಲನ ಚಿತ್ರ ನಿರ್ಮಾಪಕ ಡಾ ಎಂಎನ್ ರಾಜೇಂದ್ರಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಹೊರಗುತ್ತಿಗೆ ನೌಕರರ ನೇಮಕಕ್ಕೆ ಗಡುವು : ರಾಜ್ಯ ಸಚಿವ ಸಂಪುಟ

ಮಂಗಳೂರಿನಲ್ಲಿ ಮಾದ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಜೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ವಿನು ಬಳಂಜ ಅವರ ನಿರ್ದೇಶನದಲ್ಲಿ ಸುಮಾರು 600 ಕಂತುಗಳಲ್ಲಿ “ಜೀಕನ್ನಡ” ವಾಹಿನಿಯಲ್ಲಿ ಪ್ರಸಾರಗೊಂಡ ಈ ಧಾರಾವಾಹಿಯು ಜನಮೆಚ್ಚುಗೆಯನ್ನು ಪಡೆದಿರುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಡಿಗೆ ಮನೆಗಳ ಅಡ್ವಾನ್ಸ್ ಹೆಚ್ಚಳ : ಸಾಮಾಜಿಕ ಮಾಧ್ಯಮಗಳಲ್ಲಿ ಅಸಮಾಧಾನ

ಹಾಗೇನೇ, ನಿರ್ದೇಶಕ ಎಂ.ಡಿ.ಶ್ರೀಧರ ಅವರ ನಿರ್ದೇಶನದಲ್ಲಿ “ಗಲಾಟೆ” ಎಂಬ ಸಿನೆಮಾ ನಟ ಪ್ರಜ್ವಲ್ ದೇವರಾಜ್ ಹಾಗೂ ಬಹುತಾರಾಗಣದಲ್ಲಿ ನಿರ್ಮಾಣವಾಗಿದ್ದು. ಇದು ಬಹುಪಾಲು ವಿದೇಶದಲ್ಲಿ ಚಿತ್ರೀಕರಣಗೊಂಡಿದೆ. ಈ “ಗಲಾಟೆ” ಚಲನಚಿತ್ರ ‘ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆಯ ಮೊದಲ ಚಲನಚಿತ್ರವಾಗಿದೆ ಎಂದವರು ತಿಳಿಸಿದರು. ತುಳುನಾಡಿನ ‘ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆ ಸಂಸ್ಥೆಯಾಗಿರುವುದರಿಂದ ತುಳುಭಾಷೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿಜಯಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ “ಡಾಕ್ಟಾ.ಭಟ್ರಾ?” ಎನ್ನುವ ತುಳು ಸಿನೆಮಾ ಮುಹೂರ್ತ ಮಾಡಲಾಗಿದ್ದು. ಈ ಸಿನೆಮಾ ಮುಂದಿನ ವರ್ಷ ತೆರೆಕಾಣಲಿದೆ.

ಇದನ್ನೂ ಓದಿ: ಸಸ್ತನಿಗಳ ಪೂಜಿಸುವ ಗ್ರಾಮವೊಂದಿದೆ ; ಬಾವಲಿಗಳಿಗೆ ಭಕ್ತಿಭಾವದ ಪೂಜೆ..!

ಈ ಮಧ್ಯೆ ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ನಿರ್ದೇಶಕ, ಕಾಂತಾರ ಸಿನೆಮಾದ “ವರಾಹ ರೂಪಂ” “ಕಾಂತಾರ-1” ರ “ಗೊತ್ತಿಲ್ಲಾ ಶಿವನೇ ಭಕ್ತಿ ದಾರಿಯು” ಹಾಡುಗಳನ್ನು ರಚಿಸಿರುವ ಶಶಿರಾಜ್ ರಾವ್ ಕಾವೂರು ರಚಿಸಿರುವ ಕಥೆ. ಚಿತ್ರಕಥೆ. ಸಂಭಾಷಣೆ, ನಿರ್ದೇಶನ ಇರುವ “ವಾದಿರಾಜ ವಾಲಗ ಮಂಡಳಿ” ಎಂಬ ಕನ್ನಡ ಸಿನೆಮಾವನ್ನು ತೆರೆಗೆ ಸಿದ್ಧಪಡಿಸುತ್ತಿದ್ದೇವೆ ಎಂದು ಡಾಎಂಎನ್ ರಾಜೇಂದ್ರ ಕುಮಾರ್ ತಿಳಿಸಿದರು.

ನವೀನ್ ಡಿ ಪಡೀಲ್, ಲಕ್ಷ್ಮಣ ಕುಮಾರ್ ಮಲ್ಲೂರು, ಪ್ರಕಾಶ ತುಮಿನಾಡು, ದೀಪಕ್ ರೈ ಪಾಣಾಜಿ, ಪುಷ್ಪರಾಜ್ ಬೊಳ್ಳೂರ್, ಮೈಮ್ ರಾಮದಾಸ್, ಶೋಭರಾಜ್ ಪಾವೂರು ಸೇರಿದಂತೆ ಖ್ಯಾತನಾಮರು ತಾರಾಗಣದಲ್ಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಶಶಿರಾಜ್ ಕಾವೂರು,ಗೋಪಿನಾಥ್ ಭಟ್, ಜೆ.ಪಿ ಶೆಟ್ಟಿ, D.O.P ಚಂದ್ರ ಶೇಖರ್, ಸಂತೋಷ್ ಶೆಟ್ಟಿ, ಲಕ್ಷ್ಮಣ್ ಕುಮಾರ್, ಸುನೀಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 172

You cannot copy content of this page