ಬ್ರೇಕಿಂಗ್ ನ್ಯೂಸ್
ಕರ್ನಾಟಕ

ATM ವಾಹನದಿಂದ 7 ಕೋಟಿ ದರೋಡೆ – ಪೊಲೀಸ್ ಕಾನ್ಸ್ಟೇಬಲ್ ಪ್ರಕರಣದ ಸೂತ್ರಧಾರ

ಬೆಂಗಳೂರು ನ. 21: ಎಟಿಎಂಗೆ ಹಣ ತರುವ ವಾಹನದಿಂದ 7 ಕೋಟಿ ಹಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಗೋವಿಂದಪುರ ಠಾಣೆಯ ಪೊಲೀಸ್ ಕಾನ್‌ಸ್ಟೆಬಲ್ ಅಣ್ಣಪ್ಪ ನಾಯ್ಕ್ ಅವರನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ

ಕಮ್ಮನಹಳ್ಳಿ, ಕಲ್ಯಾಣನಗರದ ಯುವಕರನ್ನು ದರೋಡೆಗೆ ಸಿದ್ಧಪಡಿಸಿದ್ದ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ತರಬೇತಿ ನೀಡಿದ್ದರು. ಕದ್ದ ಹಣವನ್ನು ನಗರದ ಗಡಿಪ್ರದೇಶದಲ್ಲಿ ಬಚ್ಚಿಟ್ಟು ಪರಾರಿ ಆಗಿದ್ದಾರೆ.

ಕಾನ್‌ಸ್ಟೆಬಲ್ ಸೂಚನೆಯಂತೆ ಕಲ್ಯಾಣನಗರ ಹುಡುಗರ ತಂಡವೇ ₹ 7.11 ಕೋಟಿ ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಬೆಂಬಲ ನೀಡಿದ್ದರು, ಹೇಗೆ ತಪ್ಪಿಸಿಕೊಳ್ಳಬೇಕು? ಪೊಲೀಸರ ತನಿಖೆ ಯಾವ ರೀತಿ ನಡೆಯುತ್ತದೆ?ಎಂಬ ವಿಚಾರವನ್ನು ಚರ್ಚಿಸಿ ದರೋಡೆಗೆ ಸಂಚು ರೂಪಿಸಿದ್ದರು ಎಂದು ಹೇಳಲಾಗಿದೆ.

ಈ ವೇಳೆ ದರೋಡೆಯ ಹಣದ ಆಸೆಗಾಗಿ ಸಂಸ್ಥೆಯ ಗೌಪ್ಯ ಸಂಗತಿಯನ್ನು ಹಂಚಿಕೊಂಡ ಆರೋಪದ ಮೇರೆಗೆ ಸಿಎಂಎಸ್‌ ಏಜೆನ್ಸಿಯ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪೈಕಿ ಭದ್ರತಾ ವಿಭಾಗ, ತಾಂತ್ರಿಕ ವಿಭಾಗದ ಅಧಿಕಾರಿ-ಸಿಬ್ಬಂದಿ, ಇಬ್ಬರು ಕಸ್ಟೋಡಿಯನ್ ಕೂಡ ಇದ್ದಾರೆ.

ನಾಲ್ವರು ಜಂಟಿ ಪೊಲೀಸ್ ಆಯುಕ್ತರು, 18 ಡಿಸಿಪಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರಿಗೆ ಸುಳಿವು ಸಿಕ್ಕಿದ್ದು, ಇನ್ನೋವಾ ಕಾರು ಗುರುವಾರ ತಿರುಪತಿಯಲ್ಲಿ ಪತ್ತೆಯಾಗಿದೆ. ಅಲ್ಲದೇ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮಧ್ಯೆ ಪೊಲೀಸರು ಡೇವಿಡ್‌ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ : Sandalwood: ಪಟ ಪಟ ಮಾತನಾಡುವ ನಟಿ ರಚನಾ ಇಂದರ್ ಈಗ ಏನ್ಮಾಡ್ತಿದ್ದಾರೆ ಗೊತ್ತಾ..?

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page