Puttur: ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ನಡೆದಿದೆ. ಪುತ್ತೂರಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನ.21 ರಂದು ನಡೆದಿದೆ
ಇಂದಿರಾನಗರ ನಿವಾಸಿ ದಿ.ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23ವ)ರವರು ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನ ಶೋರೂಮ್ ವರ್ಕ್ ಶಾಪ್ ವೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್ ಇತ್ತೀಚೆಗೆ ಮನೆಗೆ ಬಂದಿದ್ದರು.
ನಿನ್ನೆ ಮಧ್ಯಾಹ್ನ ಮೊಬೈಲ್ ನೋಡಿಕೊಂಡಿದ್ದ ಪ್ರತೀಕ್ ಏಕಾಏಕಿ ನಾಪತ್ತೆಯಾಗಿದ್ದಾರೆ. ಮನೆಮಂದಿ ಹುಡುಕಾಡಿದಾಗ ಮನೆಯ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಮೃತರು ಸಹೋದರಿ ಮತ್ತು ಚಿಕ್ಕಪ್ಪನನ್ನು ಅಗಲಿದ್ದಾರೆ. ಮೃತರ ಚಿಕ್ಕಪ್ಪ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತೀಕ್ ಅವರ ತಂದೆ-ತಾಯಿಯೂ ಈ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: Puttur: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು; ಕಾನೂನಿನ ಮೊರೆ ಹೋಗುವ ಸಾಧ್ಯತೆ
===================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











