ಬ್ರೇಕಿಂಗ್ ನ್ಯೂಸ್
ಕರ್ನಾಟಕ

ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ : ಸಿ ಎಂ ಸಿದ್ಧರಾಮಯ್ಯ

ಬೆಂಗಳೂರು : Tulu Times |ಮೀನುಗಾರಿಕೆ ಇಲಾಖೆ ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ”ದ ಉದ್ಘಾಟನೆಯನ್ನು ಸಿ ಎಂ ಸಿದ್ಧರಾಮಯ್ಯ ನೆರವೇರಿಸಿದರು. ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ. ಮೀನುಗಾರಿಕಾ ಇಲಾಖೆಯನ್ನು ಮತ್ತು ಮೀನುಗಾರರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು ಕರಾವಳಿಯವರೇ ಆದ ಮಂಕಾಳ ವೈದ್ಯ ಅವರನ್ನೇ ಮಂತ್ರಿ ಮಾಡಿದ್ದೇವೆ. ಇವರು ಉತ್ತಮವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ;

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾಂತ್ರೀಕೃತ ದೋಣಿಗಳ ಡೀಸೆಲ್ ವಾರ್ಷಿಕ ಮಿತಿಯನ್ನು 1.5 ಲಕ್ಷ ಕಿ.ಲೋ ಲೀಟರ್ ನಿಂದ 2 ಲಕ್ಷ ಕಿ.ಲೋ ಲೀಟರ್ ಗೆ ಹೆಚ್ಚಿಸಲಾಗಿದೆ. ನಾಡ ದೋಣಿಗಳಿಗೆ ಕೈಗಾರಿಕಾ ಸೀಮೆಎಣ್ಣೆಯನ್ನು ಪ್ರತೀ ಲೀಟರ್ ಗೆ 35 ರೂ. ರಿಯಾಯಿತಿ ದರದಲ್ಲಿ ವಿತರಣೆ ಮಾಡುತ್ತಿದ್ದೇವೆ. ಒಟ್ಟಾರೆ ಮೀನುಗಾರ ಸಮುದಾಯದ ಏಳಿಗೆಗೆ ಸರ್ಕಾರ ಪ್ರತೀ ಬಜೆಟ್ ನಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು.
ರಾಜ್ಯದಲ್ಲಿ 320 ಕಿಮೀ ಕರಾವಳಿ ಪ್ರದೇಶ ಇದೆ. 5.5ಲಕ್ಷ ಹೆಕ್ಟೇ‌ರ್ ಒಳನಾಡು ಜಲಪ್ರದೇಶ ಇದೆ. ಮೀನು ರಪ್ತಿ ನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ. ದೇಶದ ಮೀನು ಉತ್ಪಾದನೆಯಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟಾರೆ ಮೀನುಗಾರಿಕೆಯು 10 ಲಕ್ಷ ಜನರ ಜೀವನಕ್ಕೆ ಆಸರೆಯಾಗಿದೆ ಎಂದರು. Karnataka ranks third in fish production in the country: CM Siddaramaiah – ತುಳು ಟೈಮ್ಸ್‌

ಇದನ್ನೂ ಓದಿ :ಮೊಟ್ಟೆ ತಿನ್ನುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತಾ..?

………

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/B7DSbRcw80Q?si=d6Bwq3WJM3jFU2OR

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page