ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಜನವರಿಯಿಂದ ‘ಆಹಾರ ಕಿಟ್’ ವಿತರಣೆ : ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ : Tulu Times | ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್. ಭೋಸರಾಜು ಚಾಲನೆ ನೀಡಿದರು.

ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.

ಚುನಾವಣಾ ಸಂದರ್ಭದಲ್ಲಿನ ಆಸ್ವಾಶನೆಯಂತೆ ಪಂಚ ಗ್ಯಾರಂಟಿ ಯೋಜನೆಯನ್ನು ಈಡೇರಿಸಿ, ಜನರ ನಂಬಿಕೆ ಮತ್ತು ವಿಶ್ವಾಸವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉಳಿಸಿಕೊಂಡಿದೆ ಎಂದು ಭೋಸರಾಜು ಅವರು ಪ್ರತಿಪಾದಿಸಿದರು. ಮುಂದಿನ ಜನವರಿಯಿಂದ ‘ಇಂದಿರಾ ಆಹಾರ ಕಿಟ್’ ಯೋಜನೆ ಜಾರಿಗೆ ಬರಲಿದ್ದು, ಬಡ ಜನರ ಆರ್ಥಿಕ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ ಎಂದು ಎನ್.ಎಸ್.ಭೋಸರಾಜು ಅವರು ವಿವರಿಸಿದರು. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಕಾರ್ಯಕ್ರಮಗಳ ಕುರಿತು ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು. ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ವಸ್ತುಪ್ರದರ್ಶನ ಮಳಿಗೆ ಗಮನ ಸೆಳೆಯಿತು.

‘Food kit ‘distribution from January: Guarantee Festival Programme launched – ತುಳು ಟೈಮ್ಸ್‌

ಇದನ್ನೂ ಓದಿ :CNAP : ಸೈಬರ್ ಕ್ರೈಂ ತಪ್ಪಿಸಲು ಮೊಬೈಲ್ ಕರೆಯಲ್ಲಿ ಹೊಸ ಅಪ್ಲಿಕೇಶನ್ ನ ಅನುಮೋದನೆಗೆ ತಯಾರಿ…!

…….

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/B7DSbRcw80Q?si=d6Bwq3WJM3jFU2OR

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 152

You cannot copy content of this page