ಸರ್ಕಾರಿ ಶಾಲೆ : Tuku Times l ಕರ್ನಾಟಕ ರಾಜ್ಯ ಸರಕಾರವು 4,056 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ LKG ಮತ್ತು UKG ತರಗತಿಗಳನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಆದೇಶ ಹೊರಡಿಸಿದೆ. 3 ರಿಂದ 6 ವರ್ಷದ ಮೊದಲ ಹಂತದ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಸೂಚನೆ : ತರಗತಿಗಳ ಸಮಯ ಬೆಳಗ್ಗೆ 10:00 ರಿಂದ ಮಧ್ಯಾಹ್ನ 3:30 ರವರೆಗೆ ವಹಿಸಲಾಗುವುದು. ಹಾಗೂ ಶಿಕ್ಷಕರು ಗ್ರಾಮೀಣಭಾರ ಮತ್ತು ಪೂರ್ವಪ್ರಾಥಮಿಕ ತರಬೇತಿ ಪಡೆದವರಾಗಿರಬೇಕು.
Pre-primary classes in 4,056 government schools from the current academic year – ತುಳು ಟೈಮ್ಸ್
ಇದನ್ನೂ ಓದಿ :ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಹೃದಯಾಘಾತದಿಂದ ನಿಧನ…!
……….
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/B7DSbRcw80Q?si=d6Bwq3WJM3jFU2OR











