ಕಾಸರಗೋಡು – ತುಳು ಟೈಮ್ಸ್: ಮ್ಯೂಸಿಕ್ ಕನ್ಸರ್ಟ್‌ನಲ್ಲಿ ಭಾರೀ ಕಾಲ್ತುಳಿತ ಸಂಭವಿಸಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡು ಬಸ್ ನಿಲ್ದಾಣದ ಸಮೀಪದ ನಡೆಯುತ್ತಿದ್ದ ಫ್ಲಿಯಾ ಫೆಸ್ಟ್‌ನಲ್ಲಿ ಮಲಯಾಳ ಗಾಯಕ ಹನಾನ್ ಶಾ ಅವರ ಸಂಗೀತ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮಕ್ಕೆ ಭಾರಿ ಜನ ಸೇರಿದ್ದರಿಂದ ಕಾಲ್ತುಳಿತ ಸಂಭವಿಸಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ.
ಕಾಲ್ತುಳಿತ ಹಿನ್ನಲೆ ಐವರು ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮ್ಯೂಸಿಕ ಕನ್ಸರ್ಟ್‌ಗೆ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿದ್ದು, ಅವ್ಯವಸ್ಥೆ ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯಕ್ರಮ ನಿಲ್ಲಿಸುವಂತೆ ಸೂಚಿಸಿದ್ದಾರೆ. ಸೇರಿದ್ದ ಜನರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಸರಿಯಾದ ಸಮಯಕ್ಕೆ ಪೊಲೀಸರು ಮಧ್ಯಪ್ರವೇಶಿಸಿದ್ದರಿಂದ ಕಾಲ್ತುಳಿತದಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತುಳು ಟೈಮ್ಸ್
ಲೆಕ್ಕಕ್ಕಿಂತ ಅಧಿಕ ಜನರು ಸೇರಿದ್ದರಿಂದ ಹಲವರು ಅಸ್ವಸ್ಥರಾಗಿದ್ದಾರೆ. ಹತ್ತಕ್ಕೂ ಅಧಿಕ ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ನೀಡಲಾಗಿದೆ. ಆ ಪೈಕಿ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಸ್ಥಳಾಂತರಿಸಲಾಗಿದೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುವ ವಿಡಿಯೊಗಳನ್ನು ಸ್ಥಳೀಯ ಮಾಧ್ಯಮಗಳು ಪ್ರಸಾರ ಮಾಡಿವೆ. ಭಾನುವಾರವಾಗಿದ್ದರಿಂದ ಭಾರಿ ಪ್ರಮಾಣದಲ್ಲಿ ಜನ ಬಂದಿದ್ದಾರೆ ಎಂದು ಆಯೋಜಕರು ಹೇಳಿದ್ದಾರೆ.
ಸಣ್ಣ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಬಗ್ಗೆ ಎಚ್ಚರಿಕೆ ನೀಡಲಾಗಿದ್ದರೂ, ಸಂಘಟಕರು ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಟಿಕೆಟ್ ದರ ₹ 100 ಇದ್ದರೂ, ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗಿದೆ ಎಂಬ ಆರೋಪವಿದೆ. ಭದ್ರತಾ ಕಾರಣಗಳನ್ನು ನೀಡಿ, ಟಿಕೆಟ್ ಇದ್ದವರನ್ನು ಪೊಲೀಸರು ಒಳಗೆ ಬಿಡದಿದ್ದರಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
A stampede-like situation occurred at a music concert in Kasaragod, Kerala, on Sunday night, November 23, 2025, leaving around 20 people hospitalized with breathing difficulties and other physical discomfort. – Tulutimes
ಇದನ್ನೂ ಓದಿ: ಎನರ್ಜಿ ಡ್ರಿಂಕ್ಸ್, ಹಣ್ಣಿನ ರಸದಲ್ಲಿ ಒ.ಆರ್.ಎಸ್ ಎಂದು ನಮೂದಿಸಿರುವುದಕ್ಕೆ ನಿರ್ಬಂಧ…!
============================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/B7DSbRcw80Q?si=U42XMUvT9of7QRAN











