ಕರ್ನಾಟಕ: Tulu Times | ಇಂದು ನವೆಂಬರ್ 25 ರಂದು ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಮಹಿಳೆಯರ ಮೇಲಾಗುತ್ತಿರುವ ಈ ದೌರ್ಜನ್ಯವನ್ನು ನಿಲ್ಲಿಸಲು, ಅವರ ಹಕ್ಕುಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ.
ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ ಯಾಕೆ ಆಚರಿಸಲಾಗುತ್ತದೆ..?
1960 ನವೆಂಬರ್ 25 ರಲ್ಲಿ ಮೂವರು ಸಹೋದರಿಯರಾದ ಪ್ಯಾಟ್ರಿಯಾ ಮರ್ಸಿಡಿಸ್ ಮೆರಾಬೆಲ್, ಮರಿಯಾ ಅರ್ಜೆಂಟೀನಾ ಮಿನಾರ್ವಾ ಮೆರಾಬೆಲ್ ಮತ್ತು ಆಂಟೋನಿಯಾ ಮಾರಿಯಾ ತೆರೇಸಾ ಮೆರಾಬೆಲ್ ಅವರನ್ನು ಡೊಮಿನಿಕನ್ ರಿಪಬ್ಲಿಕ್ ಆಡಳಿತಗಾರ ರಾಫೆಲ್ ಟ್ರುಜೆಲ್ಲೊನ ಆದೇಶದ ಮೇರೆಗೆ ಕ್ರೂರವಾಗಿ ಕೊಲ್ಲಲಾಯಿತು. ಏಕೆಂದರೆ ಆ ಮೂವರು ಸಹೋದರಿಯರು ಈತನ ಸರ್ವಾಧಿಕಾರವನ್ನು ವಿರೋಧಿಸಿದ್ದರು. ನಂತರ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಮಾಣ ತೀವ್ರವಾಗಿ ಹೆಚ್ಚಾದ ಕಾರಣ 1999 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಪ್ರತಿ ವರ್ಷ ನವೆಂಬರ್ 25 ರಂದು ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ ಆಚರಿಸಲಾಗುವುದು ಎಂದು ಘೋಷಿಸಲಾಯಿತು.
ಮಹಿಳೆಯರ ಮೇಲಿನ ದೌರ್ಜನ್ಯ, ದೈಹಿಕ, ಲೈಂಗಿಕ, ಮಾನಸಿಕ ಮತ್ತು ಆರ್ಥಿಕ ಹಿಂಸೆಯನ್ನು ಒಳಗೊಂಡಿದೆ. ಇದು ಜಾಗತಿಕ ಸಮಸ್ಯೆಯಾಗಿದೆ. ಇದು ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಆನ್ಲೈನ್ ದೌರ್ಜನ್ಯ ಸೇರಿದಂತೆ ವಿವಿಧ ರೂಪಗಳಲ್ಲಿ ಸಂಭವಿಸುತ್ತದೆ. ಈ ದೌರ್ಜನ್ಯಗಳನ್ನು ಎದುರಿಸಲು ಮತ್ತು ತಡೆಗಟ್ಟಲು ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಕಾನೂನುಗಳು ಮತ್ತು ಕ್ರಮಗಳನ್ನು ರೂಪಿಸಲಾಗಿದೆ.
ಮೊದ ಮೊದಲು ಮಹಿಳೆ ದುಡಿಯೋದೆ ತಪ್ಪು ಅನ್ನೋ ವಾದವಿತ್ತು, ಆದರೆ ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾಳೆ. ಮಹಿಳೆ ಹಾಗೂ ಗಂಡಸು ದುಡಿದರಷ್ಟೇ ಸಂಸಾರ ಎನ್ನುವ ಪರಿಸ್ಥಿತಿ ಬಂದಿದೆ. ಇದನ್ನು ತಿಳಿದ ಪೋಷಕರು ಹೆಣ್ಣುಮಕ್ಕಳನ್ನು ಉತ್ತಮ ಶಾಲೆಗಳಲ್ಲಿ ಸೇರಿಸುವ ಮೂಲಕ ಈ ಸಮಾಜಕ್ಕೆ ಉತ್ತಮ ಮಹಿಳಾ ಅಧಿಕಾರಿಗಳು, ನ್ಯಾಯಾಧೀಶರನ್ನು ಕೊಡುತ್ತಿದ್ದಾರೆ. ಇದು ಸಮಾಜದ ಪ್ರತಿಯೊಬ್ಬರಲ್ಲೂ ಹೆಣ್ಣಿನ ಬಗ್ಗೆ ಗೌರವ ಮೂಡಲು ಸಹಕಾರಿಯಾಗುತ್ತದೆ.
Today is the International Day for the Elimination of Violence against Women..!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











