ಬ್ರೇಕಿಂಗ್ ನ್ಯೂಸ್
ಕರ್ನಾಟಕದೇಶ

ಇಂದು ಭಾರತದ ಸಂವಿಧಾನ ದಿನ..ಪ್ರಧಾನಿ ನರೇಂದ್ರ ಮೋದಿ ಶುಭಾಶಯ..!

ನವದೆಹಲಿ: Tulu Times | ಇಂದು ನವೆಂಬರ್ 26 ಅನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತದೆ. ಈ ಪ್ರಯಕ್ತ ಪ್ರಧಾನಿ ನರೇಂದ್ರ ಮೋದಿ ಸಂವಿಧಾನದ ನಿರ್ಮಾತೃಗಳನ್ನು ಗೌರವಿಸಿ ಶುಭಾಶಯ ಕೋರಿದ್ದಾರೆ.

ಸಾಂವಿಧಾನಿಕ ಮೌಲ್ಯಗಳನ್ನ ಪುನರುಚ್ಚರಿಸೋಣ.. ಮೋದಿ ಕರೆ!

ಈ ಕುರಿತು  ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಮೋದಿ,  ಸಂವಿಧಾನ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ, ನಮ್ಮ ಕಾರ್ಯಗಳ ಮೂಲಕ ಮೌಲ್ಯಗಳನ್ನ ಬಲಪಡಿಸೋಣ ಎಂದು ಕರೆ ನೀಡಿದ್ದಾರೆ.  ಈ ದಿನ ನಮ್ಮ ಸಂವಿಧಾನದ ನಿರ್ಮಾತೃಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ದೂರದೃಷ್ಟಿಯು ವಿಕ್ಷಿತ ಭಾರತ ನಿರ್ಮಿಸುವ ನಮ್ಮ ಪ್ರಯತ್ನದಲ್ಲಿ ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತದೆ. ನಮ್ಮ ಸಂವಿಧಾನವು ಮಾನವ ಘನತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಅತ್ಯಂತ ಪ್ರಾಮುಖ್ಯತೆಯನ್ನ ನೀಡುತ್ತದೆ. ಇದು ನಮಗೆ ಹಕ್ಕುಗಳೊಂದಿಗೆ ಅಧಿಕಾರ ನೀಡುವುದರ ಜೊತೆಗೆ, ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸುತ್ತದೆ. ನಮ್ಮ ಕರ್ತವ್ಯವನ್ನ ನಾವು ಯಾವಾಗಲೂ ಪೂರೈಸಲು ಪ್ರಯತ್ನಿಸಬೇಕು. ಈ ಕರ್ತವ್ಯಗಳು ಬಲವಾದ ಪ್ರಜಾಪ್ರಭುತ್ವದ ಅಡಿಪಾಯ ಆಗಿದೆ. ನಮ್ಮ ಕಾರ್ಯಗಳ ಮೂಲಕ ಸಾಂವಿಧಾನಿಕ ಮೌಲ್ಯಗಳನ್ನ ಪುನರುಚ್ಚರಿಸೋಣ ಎಂದು ಕರೆ ನೀಡಿದ್ದಾರೆ.

1946ರಲ್ಲಿ ಸ್ವತಂತ್ರ ಭಾರತಕ್ಕೆ ಸಂವಿಧಾನ  ರೂಪಿಸಲು ರಚನಾ ಸಭೆ ಸ್ಥಾಪನೆಯಾಗಿದೆ. ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ನೇತ್ವತ್ವದಲ್ಲಿ ಸಂವಿಧಾನ ರೂಪಿಸಲಾಯಿತು. ಇನ್ನು ದೇಶದಲ್ಲಿ ಸಂವಿಧಾನ 1950 ಜ.26ರಂದು ಜಾರಿಗೆ ಬಂತು. ಸಂವಿಧಾನ ರಚನೆಯ ವೇಳೆ ಅಮೆರಿಕ, ಬ್ರಿಟನ್, ಐರ್ಲೆಂಡ್‌ನ ಸಂವಿಧಾನದ ಕೆಲವು ಅಂಶಗಳು, ಗಾಂಧಿ ತತ್ವಗಳಿಂದಲೂ ಪ್ರೇರಣೆ ಪಡೆಯಲಾಗಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ತಿದ್ದುಪಡಿಗಳಾಗಿರುವ ಸಂವಿಧಾನ ಎನ್ನುವ ವಿಶೇಷತೆ ನಮ್ಮ ಸಂವಿಧಾನಕ್ಕಿದೆ.

ಭಾರತವನ್ನು ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು  ಘೋಷಿಸಲಾಗಿದ್ದು, ಇಲ್ಲಿ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ.  ಸಂವಿಧಾನ ರಚನಾ ಸಭೆಯಲ್ಲಿ 250ಕ್ಕೂ ಹೆಚ್ಚು ಸದಸ್ಯರು ಇದ್ದರಾದರೂ ಇದರ ಪ್ರಮುಖ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರಾಗಿದ್ದಾರೆ. ಹೀಗಾಗಿ, ಅವರನ್ನ ಸಂವಿಧಾನ ಕರ್ತೃ ಎಂದು ಹೇಳಲಾಗುತ್ತದೆ.

honour-first-time-voters-pm-modis-letter-to-citizens-on-constitution-day!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 170

You cannot copy content of this page