ಮಂಗಳೂರು: Tulu Times | ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ನಡೆಯಿತು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಜಿಲ್ಲೆಯ ಬೇರೆಲ್ಲಾ ಸಂಘಗಳಿಗೆ ಮಾದರಿಯಾಗಿ ನಮ್ಮ ಜಿಲ್ಲೆಗೆ ಗೌರವ ತಂದ ಸಂಘ ಏನಾದರೂ ಇದ್ದರೆ ಅದು ಬಂಟರ ಸಂಘ. ಭಿನ್ನಾಭಿಪ್ರಾಯ ಇದ್ದಾಗ ಎಲ್ಲ ವರ್ಗದ ಜನರನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲುವ ಮೂಲಕ ಸಾಮರಸ್ಯವನ್ನು ಸ್ಥಾಪಿಸುವ ಮಹತ್ತರ ಜವಾಬ್ದಾರಿ ಸಾಮಾಜಿಕ ಸಂಘಟನೆಗಳಿವೆ ಎಂದರು.
ಈ ವೇಳೆ ಒಡಿಯೂರು ಗುರುದೇವಾನಂದ ಸ್ವಾಮೀಜಿ ಮಾತನಾಡಿ, ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ ಸಮಾಜಕ್ಕೆ ರಾಜ್ಯವನ್ನು ಆಳುವ ಸಾಮರ್ಥ್ಯವಿದೆ ಎಂದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರವಾಗಿ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದೆ. ಸಂಘ ಏನೇ ಸಾಧನೆ ಮಾಡಬೇಕಿದ್ರೂ ಅದಕ್ಕೆ ದಾನಿಗಳ ನೆರವು ಮತ್ತು ನಿರಂತರ ಪ್ರೋತ್ಸಾಹ ಅಗತ್ಯ ಎಂದು ತಿಳಿಸಿದರು. ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, ವಿಶ್ವದ ಎಲ್ಲ ಬಂಟರು ಬೇಧಭಾವ ಮರೆತು ಒಂದಾಗಬೇಕು. ಬಂಟ ಸಂಘಟನೆ ಮಾಡುವ ಸಾಮಾಜಿಕ ಕಾರ್ಯ ಚಟುವಟಿಕೆಗಳಲ್ಲಿ ಎಲ್ಲರೂ ಮುಕ್ತ ಮನಸ್ಸಿನಿಂದ ತೊಡಗಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಉಮಾ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಮೋಹನ್ ದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ರಂಗೋಲಿ ಮತ್ತಿತರರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ, ಜಿಲ್ಲಾ ರಾಜ್ಯೋತ್ಸವ, ಪತ್ರಕರ್ತರಿಗೆ ಹಾಗೂ ಸಾಧಕರಿಗೆ ಸನ್ಮಾನ ಮಾಡಲಾಯಿತು.
29th Annual General Meeting of the Federation of Bunt Societies in Mangalore! – ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











