ಬ್ರೇಕಿಂಗ್ ನ್ಯೂಸ್
ಕರ್ನಾಟಕ

ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿ

ಮಡಿಕೇರಿ : Tulu Times | ರೆಗ್ಯೂಲ‌ರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ಕೋರ್ಸ್ ಎಲ್ಲಾ ಸಹಕಾರ ಸಂಘ ಸಂಸ್ಥೆ/ಬ್ಯಾಂಕ್‌ಗಳಲ್ಲಿನ ಉದ್ಯೋಗ ನೇಮಕಾತಿಗೆ ಕಡ್ಡಾಯವಾಗಿರುತ್ತದೆ. ತರಬೇತಿ ಪಡೆಯಲು ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ರೂ.600 ಶಿಷ್ಯವೇತನ ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.b500 ಶಿಷ್ಯ ವೇತನ ನೀಡಲಾಗುವುದು. ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್‌ ಮ್ಯಾನೇಜ್‌ಮೆಂಟ್ ತರಬೇತಿಯು ಸಹಕಾರ ಸಂಘ/ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಕಡ್ಡಾಯವಾಗಿರುತ್ತದೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಸಕ್ತ ಅಭ್ಯರ್ಥಿಗಳು ಸಹ ಅರ್ಜಿಗಳನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್‌ ಮ್ಯಾನೇಜ್‌ಮೆಂಟ್ ಮಡಿಕೇರಿ ಇಲ್ಲಿ ಪಡೆದು ಸಲ್ಲಿಸಬಹದು; ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕ.

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್‌ ಮ್ಯಾನೇಜ್‌ಮೆಂಟ್, ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು 2026ರ ಜ.01 ರಿಂದ 6 ತಿಂಗಳ ಅವಧಿಯ ರೆಗ್ಯೂಲ‌ರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ ಹಾಗೂ ಸಹಕಾರ ಸಂಘ/ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಫಾರಂ ದೊರೆಯುವ ಸ್ಥಳ : ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -571201 ಮುಖ್ಯಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ನಿ., ಪೆನ್ನನ್‌ಲೇನ್‌, ನಗರಸಭೆ ಹಿಂಭಾಗ ರಸ್ತೆ, ಮಡಿಕೇರಿ-571201 ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್, ನಿ., ಹಳೆ ಬಸ್ ನಿಲ್ದಾಣದ ಹತ್ತಿರ, ಹಾಸನ 573201

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ FEE 208 2099/ 02&JE JHSE 9/8762110952 ಸಂಪರ್ಕಿಸಬಹುದು. Distance Education Diploma in Co-operative Management Course Training – ತುಳು ಟೈಮ್ಸ್

ಇದನ್ನೂ ಓದಿ :2030 ರ ಕಾಮನ್‌ವೆಲ್ತ್ ಕ್ರೀಡಾಕೂಟ ಭಾರತದಲ್ಲಿ ಐತಿಹಾಸಿಕ 100 ರ ಸಂಭ್ರಮೋತ್ಸವ…!

=======

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/emwzylibjoc?si=_Yb3Hr4RCzZpF10U

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 154

You cannot copy content of this page