ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕ

9 ಜಿಲ್ಲೆಗಳಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ಚಿಂತನೆ !

ಮಂಗಳೂರು: Tulu Times |ಮಂಗಳೂರು ಸೇರಿದಂತೆ ಒಟ್ಟು  9 ಜಿಲ್ಲೆಗಳಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒಲವು ವ್ಯಕ್ತಪಡಿಸಿದೆ. ಇದೀಗ ಪಿಯೂಶ್ ಗೋಯಲ್ ಜತೆ ಹೆಚ್.ಡಿ. ಕುಮಾರಸ್ವಾಮಿ ನಡೆಸಿದ್ದ ಚರ್ಚೆಗೆ ನಡೆಸಿದ್ದಾರೆ.  ಯೋಜನೆ ಅನುಷ್ಠಾನಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತಪಡಿಸಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪಿಯೂಶ್ ಗೋಯೆಲ್ ಪತ್ರ ಬರೆದು ತಿಳಿಸಿದ್ದಾರೆ.

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗ ಗತಿಯಲ್ಲಿ ಸಾಗಲಿದ್ದು, ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಸಲುವಾಗಿ 9  ಜಿಲ್ಲೆಗಳಲ್ಲಿ 9 ಕೈಗಾರಿಕಾ ಪಾರ್ಕ್ ಸ್ಥಾಪಿಸುವ ಯೋಜನೆಯಾಗಿದೆ.

ಇದನ್ನೂ ಓದಿ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು

ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಪ್ರಸ್ತಾವಿತ ಯೋಜನೆ ಉತ್ತೇಜಿಸಲಿದ್ದು, ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲ್ಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆಯಾಗಲಿದೆ.

ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP) ಎಂಬುದು ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಮೂಲಸೌಕರ್ಯ ಯೋಜನೆಯಾಗಿದ್ದು, ಇದು ದೇಶಾದ್ಯಂತ ಜಾಗತಿಕ ಮಟ್ಟದ ಕೈಗಾರಿಕಾ ಕೇಂದ್ರಗಳು ಮತ್ತು ಸ್ಮಾರ್ಟ್ ಸಿಟಿಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮವು ಉತ್ಪಾದನಾ ವಲಯವನ್ನು ಹೆಚ್ಚಿಸುವ, ರಫ್ತು ಸಾಮರ್ಥ್ಯಗಳನ್ನು ಸುಧಾರಿಸುವ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸುತ್ತದೆ. ಹೊಸ ಕೈಗಾರಿಕಾ ನಗರಗಳು ಮತ್ತು ಉತ್ಪಾದನಾ ಕೇಂದ್ರಗಳ ಸ್ಥಾಪನೆಯ ಮೂಲಕ ಲಕ್ಷಾಂತರ ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ.

ಯೋಜನೆ ಕುರಿತಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಚಿವ ಪಿಯೂಶ್ ಗೋಯೆಲ್ ಅವರೊಂದಿಗೆ ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೆಲವು ದಿನಗಳ ಹಿಂದೆ ಮಾತುಕತೆ ನಡೆಸಿದ್ದಾರೆ.  ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು, ಬೀದ‌ರ್ ಜಿಲ್ಲೆಗಳನ್ನು ಒಳಗೊಂಡ ಜಿಲ್ಲೆಗಳಲ್ಲಿ ಯೋಜನೆ ಅಭಿವೃದ್ಧಿಪಡಿಸಲಾಗುತ್ತದೆ.

National Industrial Corridor development planned in 9 districts! – ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 168

You cannot copy content of this page