ನವದೆಹಲಿ: Tulu Times | ಇಂದು ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ನಡೆಯಲಿದ್ದು, ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಎಂ-ಡಿಸಿಎಂ ಮುಖಾಮುಖಿ ಆಗುವುದಕ್ಕೂ ಮುನ್ನ ಇಂದು ನಿರ್ಣಾಯಕ ಸಭೆ ನಡೆಯಲಿದ್ದು, ಮುಂಬರುವ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಇದನ್ನೂ ಓದಿ: 9 ಜಿಲ್ಲೆಗಳಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ಚಿಂತನೆ !
ಸಿಎಂ-ಡಿಸಿಎಂ ಮುಖಾಮುಖಿಗೆ ಮುನ್ನ ʻಹೈʼಕಮಾಂಡ್ ಮೀಟಿಂಗ್ !
ಈ ಮಹತ್ತ್ವದ ಸಭೆಗೆ ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ. ಸಿಎಂ-ಡಿಸಿಎಂ ಮುಖಾಮುಖಿ ಆಗುವುದಕ್ಕೂ ಮುನ್ನ ಇಂದು ನಿರ್ಣಾಯಕ ಸಭೆ ನಡೆಸಲಿದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ನಾಳೆಯಿಂದ ಈ ರಾಶಿಯವರಿಗೆ ಶುಭಫಲ : ಎಲ್ಲವೂ ಹೊಸತಾಗಿ ಸಿಗುವ ಅವಕಾಶ…!
ಇಂದು ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ ಸಭೆ ನಡೆಯಲಿದೆ. ಯಾರು ಸಿಎಂ ಬೇಕು ಅನ್ನೋದರ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿ ಇಂದು ಸಭೆ ನಡೆಸಲಿದ್ದಾರೆ. ಪವರ್ ಶೇರಿಂಗ್ ವಿಚಾರದಲ್ಲಿ ಒಂದು ಕ್ಲಾರಿಟಿಗೆ ಬರುವ ಸಾಧ್ಯತೆ ಇದೆ. ಇಂದು ಹೈಕಮಾಂಡ್, ಸಿಎಂ-ಡಿಸಿಎಂ ಇಬ್ಬರ ನಡುವಿನ ಸಂಧಾನ ಸೂತ್ರಕ್ಕೆ ಮಾನದಂಡವೇನು? ಸಂಧಾನ ಫಾರ್ಮುಲಾ ಏನು ? ಎಂಬುದನ್ನು ನಿಗದಿ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಚಳಿಗಾಲದಲ್ಲಿ ಹೆಚ್ಚಿನ ಕಾಫಿ ಸೇವನೆಯಿಂದಾಗುವ ಅಪಾಯ ನೋಡಿ….!
ದೆಹಲಿಯಿಂದ ಬೆಂಗಳೂರಿಗೆ ಬರುವಾಗ ಖರ್ಗೆಗೆ ರಾಹುಲ್ ಗಾಂಧಿ ದೂರವಾಣಿ ಕರೆ ಮಾಡಿದ್ದಾರೆ. ಖರ್ಗೆ ಅವರು ಮತ್ತೆ ಬೆಂಗಳೂರಿಂದ ದೆಹಲಿಗೆ ಹೋಗಲಿದ್ದು, ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜೇವಾಲ ಸಂಜೆ ಹೈವೋಲ್ಟೇಜ್ ಮೀಟಿಂಗ್ ನಡೆಸಲಿದ್ದಾರೆ. ನ.29ರ ಸಭೆಗೂ ಮೊದಲು ರಾಜ್ಯದ ಬೆಳವಣಿಗೆಯ ಬಗ್ಗೆ ಹೈಕಮಾಂಡ್ ನಾಯಕರು ಗಂಭೀರವಾಗಿ ಚರ್ಚಿಸಲಿದ್ದಾರೆ. ಒಟ್ಟಾರೆ, ರಾಜ್ಯ ಕಾಂಗ್ರೆಸ್‌ನಲ್ಲಿನ ಅಧಿಕಾರ ಹಂಚಿಕೆಯ ಗೊಂದಲ ಶೀಘ್ರದಲ್ಲೇ ಬಗೆಹರಿಯುವ ನಿರೀಕ್ಷೆಯಿದೆ.
ಇದನ್ನೂ ಓದಿ: ತಡವಾಗಿ ಆಹಾರ ಸೇವಿಸೋದ್ರಿಂದ ಏನೆಲ್ಲಾ ಅನಾನುಕೂಲವಾಗುತ್ತೆ…!
High command meeting before CM-DCM face-off!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











