ರಾಜ್ಯ ಸರ್ಕಾರ : Tulu Times | ಅನಿಶ್ಚಿತ ಮಳೆಯಿಂದ ರೈತರು ಬೆಳೆದ ಬೆಳೆಗಳು ಹಾಳಾಗುತ್ತವೆ ಮತ್ತು ಹಾನಿಗೊಳಗಾಗುತ್ತವೆ. ಈ ಕಾರಣ ಸರ್ಕಾರದ ವಿವಿಧ ಯೋಜನೆಗಳು ಪ್ರಕ್ರಿಯೆಗಳ ಮೂಲಕ, ರೈತರಿಗೆ ಪರಿಹಾರವು ಸಹಾಯಧನದ ಮೂಲಕ ಲಭ್ಯವಿರುತ್ತದೆ.
ಈ ಬಾರಿ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ಹಾನಿಯಾದ ಬೆಳೆಗೆ ಸಿದ್ದರಾಮಯ್ಯ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡಿದ್ದು, ನಿರಂತರ ಮಳೆಯಿಂದಾಗಿ ಬಂಡವಾಳ ಹಾಕಿ ಬೆಳೆದ ಬೆಳೆ ಹಾಳಾಗಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದ್ದು, ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ರೂಪಾಯಿನ್ನು ಸಿಎಂ ಸಿದ್ದರಾಮಯ್ಯನವರು ಇಂದು (ನವೆಂಬರ್ 27) ಇನ್ಪುಟ್ ಸಬ್ಸಿಡಿ ವಿತರಿಸಿದರು.
ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರ್ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 8500 ರೂ. ರಿಂದ 17 ಸಾವಿರ ರೂ., ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 17ಸಾವಿರದಿಂದ ರೂ.25,500 ರೂ. ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ 22,500 ರೂ.ದಿಂದ 31 ಸಾವಿರ ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.
ಇನ್ನು ಬೆಳೆ ನಷ್ಟದ ಗ್ರಾಮವಾರು ಪಟ್ಟಿಯನ್ನು ಗ್ರಾಮ ಚಾವಡಿಗಳಲ್ಲಿ ಹಾಗೂ ಆನ್ಲೈನ್ನಲ್ಲಿ ಪ್ರಕಟಿಸಿ, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಬಳಿಕ ನಷ್ಟ ಅನುಭವಿಸಿದ ರೈತರ ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಇನ್ಪುಟ್ ಸಬ್ಸಿಡಿಯನ್ನು ನೇರವಾಗಿ ರೈತರಿಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ. Increase in state government input subsidy rates: Help for farmers -ತುಳು ಟೈಮ್ಸ್
ಇದನ್ನೂ ಓದಿ :ನಿಮ್ಮ ಮನೆಯ ಒಳಗಡೆ ಕೆಂಬೂತ ಪಕ್ಷಿ ಹಾರಿಕೊಂಡು ಬಂತಾ..? ಹಾಗಾದ್ರೆ ನೀವು ಅದೃಷ್ಟವಂತರು!
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/XB6d0r1sbnY?si=j9Wb0a_OmgkdFIQs











