ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ಗೌರವದ ವಿಚಾರ : ನರೇಂದ್ರ ಮೋದಿ

ಉಡುಪಿ : Tulu Times | ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 28 ರ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತಾಮುತ್ತ ಡ್ರೋನ್ ಹಾರಾಟ ಮತ್ತು ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಾದ್ಯಂತ ಪೊಲೀಸ್ ಕಣ್ಗಾವಲು ಹಾಕಲಾಗಿದೆ. ಸುಮಾರು 3000ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹತ್ತು ಮಂದಿ ಪೊಲೀಸ್‌ ಆಯುಕ್ತರು ಸೇರಿದಂತೆ 8ಕ್ಕೂ ಹೆಚ್ಚು ಜಿಲ್ಲೆಗಳಿಂದ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಭದ್ರತಾ ವ್ಯವಸ್ಥೆಗೆ ಎಸ್‌ಪಿಜಿ ತಂಡ ನೇತೃತ್ವ ವಹಿಸಿದ್ದು, ಈಗಾಗಲೇ ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದೆ. ಸ್ಥಳೀಯ ಪೊಲೀಸ್‌ ಸಿಬ್ಬಂದಿಯೂ ಅವರೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಟ್ಟು ಬಂದೋಬಸ್ತ್‌ ವ್ಯವಸ್ಥೆ ಎಡಿಜಿಪಿ ಜಿತೇಂದ್ರ ಕುಮಾರ್‌ ಅವರ ಮೇಲ್ವಿಚಾರಣೆಯಲ್ಲಿ, ಐಜಿ ಸಂದೀಪ್‌ ಪಟೀಲ್‌ ಮತ್ತು ಐಜಿ ಚಂದ್ರಗುಪ್ತ ನೇತೃತ್ವದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ಹೇಳಿದರು.

ಇದರೊಂದಿಗೆ, ನಾಳೆ ಉಡುಪಿಗೆ ಭೇಟಿ ನೀಡುವ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಬರೆದುಕೊಂಡಿರುವುದು ಅದೂ ಕನ್ನಡದಲ್ಲಿ ಇರುವುದಂತೂ ಬಹಳ ವೈರಲ್ ಆಗುತ್ತಿದೆ.

It is an honour to have the opportunity to participate in the Laksh Kanta Gita Parayan program: Narendra Modi – ತುಳು ಟೈಮ್ಸ್

ಇದನ್ನೂ ಓದಿ :ರಾಜ್ಯ ಸರ್ಕಾರದ ಇನ್ಪುಟ್ ಸಬ್ಸಿಡಿಗಳ ದರಗಳಲ್ಲಿ ಹೆಚ್ಚಳ : ರೈತರಿಗೆ ನೆರವು

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/XB6d0r1sbnY?si=j9Wb0a_OmgkdFIQs

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page