ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಸಿಎಂ- ಡಿಸಿಎಂ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ – ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದ ನಾಯಕರು!

ಬೆಂಗಳೂರು: Tulu Times | ಸಿಎಂ, ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ಬ್ರೇಕ್‌ ಫಾಸ್ಟ್ ಮೀಟಿಂಗ್ ಮಾಡ್ತಿದ್ದಾರೆ. ಈ ಮಧ್ಯೆ ಅವರ ಆಪ್ತ ವಲಯದಲ್ಲಿ ಟೆನ್ನನ್ ಹೆಚ್ಚಾಗಿದೆ. ನಾಯಕರು ಯಾವ ತೀರ್ಮಾನಕ್ಕೆ ಬರ್ತಾರೆ? ನಮ್ಮ ಲೀಡ‌ರ್ ಪರ ನಾವು ಮಾಡಿದ್ದ ತಂತ್ರಗಳು ಏನಾಗುತ್ತೆ? ನಮ್ಮ ನಾಯಕರು ಪಟ್ಟು ಸಡಿಲಿಸದಿರಲಿ ಎಂಬ ಟೆನ್ನನ್ ಶುರುವಾಗಿದೆ.

ಡಿಕೆಶಿ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಮುಖ್ಯಮಂತ್ರಿಗಳು ಆತ್ಮೀಯವಾಗಿ ವೆಲ್‌ಕಮ್‌ ಮಾಡಿ, ಇಬ್ಬರೂ ಒಟ್ಟಿಗೆ  ಸೇರಿ ಬ್ರೇಕ್‌ ಫಾಸ್ಟ್‌ ಮಾಡಿದ್ದಾರೆ. ಬಳಿಕ ಅಲ್ಲಿಯೇ  ಒನ್‌ ಟು ಒನ್‌ ಮೀಟಿಂಗ್‌ ಶುರು ಮಾಡಿದ್ದಾರೆ.  ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಹಿನ್ನೆಲೆ ಸಿಎಂ ಕಾವೇರಿ ನಿವಾಸದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.  3 ಕೆಎಸ್‌ಆರ್‌ಪಿ ತುಕಡಿ, 2 ಬಸ್ ನಿಯೋಜನೆ ಮಾಡಲಾಗಿತ್ತು.

ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯನ್ನು ಅಣ್ಣ ಎಂದು ಕೂಗಾಡಿದ ಕಾವ್ಯ..!

ಕಾಂಗ್ರೆಸ್ ಹೈಕಮಾಂಡ್ ನಿಂದಲೇ ಇಂಥದ್ದೊಂದು ಸೂಚನೆ ಬಂದಿತ್ತು. ಹೈಕಮಾಂಡ್ ಸೂಚನೆಯಂತೆ ಬ್ರೇಕ್‌ಫಾಸ್ಟ್ ಮೀಟಿಂಗ್ ಆಯೋಜನೆಗೊಂಡಿದೆ ಎನ್ನಲಾಗಿದೆ. ಈಗ ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಸಮಸ್ಯೆಯನ್ನು ನೀವಿಬ್ಬರೇ ಕುಳಿತು ಬಗೆಹರಿಸಿಕೊಳ್ಳಿ. ಪರಸ್ಪರ ಭೇಟಿಯಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬನ್ನಿ. ಕಿತ್ತಾಡಿಕೊಂಡು ಬರಬೇಡಿ, ನಾವು ಸಂಧಾನ ಮಾಡಲ್ಲ ಎಂದು  ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ.

ಒಟ್ಟಿನಲ್ಲಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಇಂದು ಬಹುತೇಕ ತೆರೆ ಬೀಳುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಮುಕ್ತಾಯವಾಗಿದೆ. ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರಲು ಉಭಯ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಭೆಯ ನಂತರ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಸಭೆಯು ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕುರ್ಚಿ ಕಾದಾಟಕ್ಕೆ ತೆರೆ ಬೀಳಲಿದೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.

CM-DCM breakfast meeting – Leaders say they are committed to the high command’s decision!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page