ಪುತ್ತೂರು – ತುಳು ಟೈಮ್ಸ್: ಗೋಸಾಗಾಟ ಮಾಡುವಾಗ ವಾಹನ ಕೆಟ್ಟು ಗೋವುಗಳನ್ನು ನಡುರಸ್ತೆಯಲ್ಲೇ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ.
ಅಕ್ರಮ ಗೋ ಸಾಗಾಟ ಮಾಡುವ ಸಂದರ್ಭ ವಾಹನ ಕೆಟ್ಟು ಹೋಗಿದೆ ಎಂದು ನಡುರಸ್ತೆಯಲ್ಲೇ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣವೇ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಕಾರ್ಯಕರ್ತರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಾರಿಸುದಾರರಿಲ್ಲದ ಈ ಗೋವುಗಳನ್ನು ಕಳವು ಮಾಡಿ ಸಾಗಾಟ ಮಾಡಿರುವ ಸಂಶಯ ವ್ಯಕ್ತವಾಗಿದೆ. ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಗ್ರಹಿಸಿದೆ.
Cattle bid spoiled in Puttur after vehicle get strucked – Tulu Times
ಇದನ್ನೂ ಓದಿ: ಸಿಎಂ- ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ – ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ನಾಯಕರು!
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











