ಬೆಂಗಳೂರು : Tulu Times | ಸರ್ಕಾರದ ಆರೋಗ್ಯ ಯೋಜನೆಗಳನ್ನು ಆರ್ಥಿಕ ಮತ್ತು ಕಾರ್ಯತಂತ್ರದ ದೃಷ್ಟಿಯಿಂದ ಸಮರ್ಪಕವಾಗಿ ನಿರ್ವಹಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗಳನ್ನು ಪರಿಚಯಿಸಿದ್ದು, ಇದೊಂದು ಸ್ವಾಯುತ್ತ ಸಂಸ್ಥೆಯಾಗಿದ್ದು 2009ರಲ್ಲಿ ಸ್ಥಾಪಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಎಕ್ಸಿಕ್ಯೂಟಿವ್, ಡಾಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 05 ರಂದು ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗತಕ್ಕದ್ದು.
ಬೆಂಗಳೂರಿನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಂಸ್ಥೆಯಲ್ಲಿ ಒಟ್ಟು 35 ಹುದ್ದೆಗಳಿದ್ದು ಹಿರಿಯ ಕಾರ್ಯನಿರ್ವಾಹಕ ವೈದ್ಯ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಂದೂವರೆ ಲಕ್ಷದೊಳಗೆ ಸಂಬಳವಿದ್ದು, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿಡಿಎಸ್, ಬಿಇ/ ಬಿ.ಟೆಕ್, ಎಂಪಿಎಚ್, ಎಂಬಿಬಿಎಸ್, ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಬೆಳಿಗ್ಗೆ 10.30 ರಿಂದ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೌಧ, 7 ನೇ ಮಹಡಿ, ಬೆಂಗಳೂರು Children falling ill after eating hot meals: The problem doesn’t seem to be going away – ತುಳು ಟೈಮ್ಸ್
ಇದನ್ನೂ ಓದಿ :ಹುಟ್ಟು ಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳಿಗೆ ಮೋಹಕತಾರೆ ಗುಡ್ ನ್ಯೂಸ್..!
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/9__hBRPRAJ0?si=5TToPhSTlJIx-LWk











