ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಸ್ಯಾಂಡಲ್‌ ವುಡ್ ಹಾಸ್ಯನಟ‌ ಎಂ.ಎಸ್‌ ಉಮೇಶ್ ಇನ್ನಿಲ್ಲ..!

ಸಿನಿಮಾ: Tulu Times | ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.  ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು.

350ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಉಮೇಶ್‌ ಅವರು ತಮ್ಮ ಹಾಸ್ಯದ ಹಾವಭಾವ ಹಾಗೂ “ಅಪಾರ್ಥ ಮಾಡ್ಕೋಬೇಡಿ” ಡೈಲಾಗ್‌ನಿಂದ ಜನಪ್ರೀಯತೆ ಗಳಿಸಿದ್ದರು.  ಸದ್ಯ ಚಿಕಿತ್ಸೆ ಫಲಿಸದೆ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಚಿತ್ರರಂಗದ ಕಲಾವಿದರು ಕಣ್ಣೀರು ಹಾಕುತ್ತಿದ್ದಾರೆ. ಕೆಲವು ತಿಂಗಳುಗಳ ಹಿಂದೆ  ಹಿರಿಯ ನಟ ಉಮೇಶ್‌ ಮನೆಯಲ್ಲಿ ಜಾರಿಬಿದ್ದಿದ್ದರು.  ಈ ವೇಳೆ ಕಾಲು ಮತ್ತು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣವೇ  ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುವಾಗ ಉಮೇಶ್‌ ಅವರಿಗೆ ಕ್ಯಾನ್ಸರ್‌ ಇರೋದು ಪತ್ತೆಯಾಗಿತ್ತು. ಕಾಲಿಗೆ ಸರ್ಜರಿ ಮಾಡುವಾಗ ಅವರಿಗೆ ಲಿವರ್ ಕ್ಯಾನ್ಸರ್ ಇರುವ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದರು.

ಇದನ್ನೂ ಓದಿ: ನವೆಂಬರ್ 30 ರ ದಿನ ಭವಿಷ್ಯ ಹೀಗಿದೆ ನೋಡಿ…!

ಹಿರಿಯ ನಟ ಉಮೇಶ್‌ 1945ರ ಏಪ್ರಿಲ್‌ 22ರಂದು ಮೈಸೂರಿನಲ್ಲಿ ಜನಿಸಿದರು.  ಕನ್ನಡ ವೃತ್ತಿ ರಂಗಭೂಮಿ ಮತ್ತು ಚಲನಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದರು. ʻಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ. ʻಹೇಳ್ಕೊಳ್ಳೋಣ ಅಂದ್ರೆ ನನ್‌ಹೆಂಡ್ತಿ ಕೂಡಾ ಊರಲ್ಲಿಲ್ವೆ..ʼ ಹೀಗೆ ತಮ್ಮ  ಸಂಭಾಷಣೆಯ  ಮೂಲಕ ಕನ್ನಡ ಚಿತ್ರರಸಿಕರ ಮನ ಗೆದ್ದವರು ಎಂ.ಎಸ್ ಉಮೇಶ್.  ಹುಟ್ಟಿನಿಂದಲೇ ರಂಗಭೂಮಿ ನಂಟು ಇಟ್ಟುಕೊಂಡ ಇವರ ತಂದೆ ಎ.ಎಲ್ ಶ್ರೀಕಂಠಯ್ಯ, ತಾಯಿ ನಂಜಮ್ಮ. ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಒಲವು ಅವರಿಗೆ ಹುಟ್ಟಿನಿಂದಲೇ ಬಂತು.

ಗುಬ್ಬಿ ವೀರಣ್ಣನವರು ಇವರು ಬಾಲ್ಯದಲ್ಲಿದ್ದಾಗ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು. ಎಂ.ಸಿ.ಮಹಾದೇವ ಸ್ವಾಮಿಯವರ ಕನ್ನಡ ಥಿಯೇಟರ್ಸ್ ಕಂಪನಿಯಲ್ಲೂ ಉಮೇಶ್ ಬಾಲನಟನಾಗಿ ಪಾತ್ರವಹಿಸಿದ್ದರು. ಉಮೇಶರಿಗೆ ನಟನೆಯ ಜೊತೆಗೆ ಹಲವಾರು ವಾದನ ಕಲೆಗಳೂ ಕರಗತವಾಗಿವೆ.  ಕಥಾಸಂಗಮದʼ ಎಂಬ ಮೂರು ಕಥಾನಕಗಳ ಚಿತ್ರವಾದ ಮುನಿತಾಯಿಯಲ್ಲಿ ‘ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, 1994ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, 1997ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ‘ಬಣ್ಣದ ಘಂಟೆ’ಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಉಮೇಶ್‌ ಅವರಿಗೆ ಸಿಕ್ಕಿವೆ.

Comedian M.S. Umesh is no more- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 154

You cannot copy content of this page