ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

ಪುತ್ತೂರು: ಚಿಕನ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದ ಯುವಕ ನಾಪತ್ತೆ

ಪುತ್ತೂರು – ತುಳು ಟೈಮ್ಸ್:‌ ಚಿಕನ್‌ ಸೆಂಟರ್‌ ವೊಂದರಲ್ಲಿ ಕೆಲಸ ಮಾಡ್ತಿದ್ದ ಯುವಕ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ನಾಪತ್ತೆಯಾದ ಯುವಕ.

ಪುತ್ತೂರಿನ ಪಡೀಲ್‌ನಲ್ಲಿ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದಾರೆ. ಆ ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದ್ದಾರೆ ಎನ್ನಲಾಗಿದೆ.

ಅಂಗಡಿಯಿಂದ ಹೋಗಿದ್ದ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹಿಂದಿರುಗದೆ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Puttur: A complaint has been registered at the Puttur City Police Station regarding the disappearance of a young man who worked at a chicken center in Padil in the city. Tulu Times

ಇದನ್ನೂ ಓದಿ: ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿಎಂ!


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 34

You cannot copy content of this page