ಬ್ರೇಕಿಂಗ್ ನ್ಯೂಸ್
ಕರ್ನಾಟಕಶೈಕ್ಷಣಿಕ

ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಉಚಿತ `ನೋಟ್ ಬುಕ್’ ವಿತರಣೆ!

ಬೆಂಗಳೂರು: Tulu Times | ಮುಂದಿನ ಶೈಕ್ಷಣಿಕ ಸಾಲಿನಿಂದ  ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳ ಜೊತೆಗೆ ನೋಟ್ ಬುಕ್ ಗಳನ್ನು ಉಚಿತವಾಗಿ  ವಿತರಿಸಲು ರಾಜ್ಯ ಸರ್ಕಾರ  ಸಿದ್ಧತೆ ನಡೆಸಿದೆ.

ಇದನ್ನೂ ಓದಿ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಆಡಳಿತ ಮಂಡಳಿ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ  ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ ಬುಕ್‌ ಗಳನ್ನು ಉಚಿತವಾಗಿ ವಿತರಿಸುವುದಾಗಿ  ಘೋಷಿಸಿದ್ದಾರೆ. ರಾಜ್ಯದ 46 ಸಾವಿರ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗಿನ ಸುಮಾರು 38 ಲಕ್ಷ ಮಕ್ಕಳಿಗೆ ನೋಟ್ ಬುಕ್ ವಿತರಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಈ ಯೋಜನೆಗೆ ಅಂದಾಜು 24 ಕೋಟಿ ರು. ಅನುದಾನ ಬೇಕಾಗುತ್ತದೆ.

ಇದನ್ನೂ ಓದಿ: ಪುತ್ತೂರು: ಚಿಕನ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದ ಯುವಕ ನಾಪತ್ತೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ರಾಗಿ ಮಾಲ್ಟ್ ಮಿಶ್ರಿತ ಹಾಲು, ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೂ, ಮಕ್ಕಳ ದಾಖಲಾತಿ ಮಾತ್ರ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಮಹತ್ವದ ಕ್ರಮ ಕೈಗೊಂಡಿದೆ. ಕೆಲ ಪೋಷಕರು ಮಕ್ಕಳಿಗೆ ನೋಟ್‌ ಬುಕ್‌ ಗಳನ್ನು ಖರೀದಿಸಲು ಕಷ್ಟಪಡುತ್ತಿದ್ದಾರೆ. ಬರವಣಿಗೆ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ನೋಟ್ ಬುಕ್ ಗಳ ವಿತರಣೆಗೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ಮೂಲಕವೂ ನೋಟ್‌ಬುಕ್‌ಗಳನ್ನು ಪೂರೈಸಲಾಗುವುದು.

ಇದನ್ನೂ ಓದಿ: ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿಎಂ!

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿವರೆಗಿನ ಸುಮಾರು 38 ಲಕ್ಷ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುತ್ತದೆ.ಸರ್ಕಾರಿ ಶಾಲಾ ಮಕ್ಕಳಿಗೆ ಈಗಾಗಲೇ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ರಾಗಿ ಮಾಲ್ಟ್ ಮಿಶ್ರಿತ ಹಾಲು ಮತ್ತು ಮಧ್ಯಾಹ್ನದ ಬಿಸಿಯೂಟದಂತಹ ಇತರ ಸೌಲಭ್ಯಗಳು ಲಭ್ಯವಿದೆ.

ಇದನ್ನೂ ಓದಿ: ಮೈ ನಡುಗುವ ಚಳಿಯನ್ನು ಎಂಜಾಯ್‌ ಮಾಡುತ್ತಿರುವ ಕರುನಾಡ ಜನ..!

Free notebooks to be distributed to school students from next year! – ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:‌ https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page