ಬೆಂಗಳೂರು: Tulu Times | ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಉಪಹಾರ ಸೇವನೆ ಮಾಡಿದ್ದಾರೆ. ಕಾವೇರಿ ನಿವಾಸದಿಂದ ಸಿಎಂ ಒಬ್ಬರೇ ಹೊರಟು ಬೆಳಗ್ಗೆ 9:40 ರ ವೇಳೆಗೆ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದರು.
ಸಿಎಂ ಆಗಮಿಸಿದ ತಕ್ಷಣ ಡಿಕೆಶಿ ಹೂಗುಚ್ಚ ನೀಡಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಕುಣಿಗಲ್ ರಂಗನಾಥ್ ಅವರು ಮುಖ್ಯಮಂತ್ರಿ ಅವರ ಕಾಲಿಗೆ ಅಡ್ಡ ಬಿದ್ದು ನಮಸ್ಕರಿಸಿದರು. ಸಿಎಂ ಸಿದ್ದರಾಮಯ್ಯ ನಾಟಿಕೋಳಿ ಮೆನು ಸವಿಯಲು ಡಿ ಕೆ ಶಿವಕುಮಾರ್ ಅವರ ಮನೆಗೆ ತೆರಳಿದ್ದಾರೆ ಎನ್ನಲಾಗಿದೆ. ಬ್ರೇಕ್‌ಫಾಸ್ಟ್ ಬಳಿಕ ಇಬ್ಬರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ. ಸಿಎಂ ಆಗಮನದ ಹಿನ್ನೆಲೆ ಸದಾಶಿವನಗರದ ಡಿಕೆಶಿ ಅವರ ಮನೆ ಮುಂದಿನ ರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಮೊದಲು ಸಿಎಂ ಜೊತೆ ಕೆಲ ಶಾಸಕರು ಡಿಕೆಶಿ ಮನೆಗೆ ಬರಲಿದ್ದಾರೆ ಎಂಬ ಸುದ್ದಿ ಬಂದಿತ್ತು.
ಕಳೆದ ವಾರ ಸಿಎಂ, ಡಿಸಿಎಂ ಕಾವೇರಿ ನಿವಾಸದಲ್ಲಿ ಮಹತ್ವದ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡ್ತಿದ್ದಾರೆ. ಡಿಕೆಶಿ ಅವರು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಮುಖ್ಯಮಂತ್ರಿಗಳು ಆತ್ಮೀಯವಾಗಿ ವೆಲ್‌ಕಮ್ ಮಾಡಿ, ಇಬ್ಬರೂ ಒಟ್ಟಿಗೆ ಸೇರಿ ಬ್ರೇಕ್ ಫಾಸ್ಟ್ ಮಾಡಿದ್ದಾರೆ. ಬಳಿಕ ಅಲ್ಲಿಯೇ ಒನ್ ಟು ಒನ್ ಮೀಟಿಂಗ್ ಶುರು ಮಾಡಿದ್ದಾರೆ. ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಹಿನ್ನೆಲೆ ಸಿಎಂ ಕಾವೇರಿ ನಿವಾಸದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. 3 ಕೆಎಸ್‌ಆರ್‌ಪಿ ತುಕಡಿ, 2 ಬಸ್ ನಿಯೋಜನೆ ಮಾಡಲಾಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ನಲ್ಲಿ ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರಲು ಉಭಯ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿತ್ತು.ಇನ್ನು ಸಿಎಂಗೆ ನಾಟಿ ಕೋಳಿ ಇಷ್ಟ ಎನ್ನುವ ಕಾರಣಕ್ಕೆ ಬೆಳಗ್ಗಿನ ತಿಂಡಿಗೆ ನಾಟಿ ಕೋಳಿ ಸಾರಿನ ಆತಿಥ್ಯ ನೀಡಿದ್ದಾರೆ. ತಿಂಡಿಗೆ ಇಡ್ಲಿ ನಾಟಿ ಕೋಳಿ ಸಾರು ಹಾಗೂ ನಾಟಿಕೋಳಿ ಫ್ರೈ ಸ್ಪೆಷಲ್ ಮೆನು ಸಿದ್ಧಪಡಿಸಲಾಗಿದೆ.
CM arrives at DKshi’s residence: Presents bouquet of flowers… DCM prepares a chicken! – ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











