ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಮಂಗಳೂರು

ರಿಷಭ್‌ ಶೆಟ್ಟಿಗೆ ಕ್ಷಮೆ ಕೇಳಿದ ಬಾಲಿವುಡ್ ನಟ ರಣವೀರ್ ಸಿಂಗ್..!

ಸಿನಿಮಾ: Tulu Times | ಗೋವಾದಲ್ಲಿ ನಡೆದ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದ (IFFI) ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ದೈವವನ್ನು ಅಣಕಿಸಿರುವ ಬಗ್ಗೆ ನಟ ರಣವೀರ್ ಸಿಂಗ್ ರಿಷಭ್‌ ಶೆಟ್ಟಿ ಬಳಿ ಕ್ಷಮೆ ಕೇಳಿದ್ದಾರೆ.

ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಶೇರ್‌..!

ನಟ ರಿಷಬ್ ಶೆಟ್ಟಿಯ ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಕ್ಷಮೆಯಾಚಿಸಿದ್ದಾರೆ. ಈ ಕುರಿತು ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಶೇರ್‌ ಮಾಡಿಕೊಂಡಿದ್ದಾರೆ. ನಾನೊಬ್ಬ ನಟನಾಗಿ ಆ ನಿರ್ದಿಷ್ಟ ದೃಶ್ಯದಲ್ಲಿ ನಟಿಸುವುದು ಎಷ್ಟು ಸವಾಲಾಗಿರುತ್ತದೆ ಎನ್ನೋದು ನನಗೆ ಚೆನ್ನಾಗಿ ಗೊತ್ತು. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಹಾಗೂ ನಂಬಿಕೆಯನ್ನು ನಾನು ಗೌರವಿಸುತ್ತೇನೆ. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಬರೆದುಕೊಂಡಿದ್ದಾರೆ. ಸಮುದಾಯ ಆರಾಧಿಸುವ ಚಾಮುಂಡಿದೇವಿಯನ್ನು ಹೆಣ್ಣು ದೆವ್ವ ಎಂದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದೆ.

ಇದನ್ನೂ ಓದಿ: ಇಮ್ರಾನ್ ಖಾನ್ ಸಾವಿನ ವದಂತಿ; ಬೆಂಬಲಿಗರು ಬೃಹತ್ ಪ್ರತಿಭಟನೆಗೆ ಸಜ್ಜು!

ರಣವೀರ್ ಅಣಕಿಸಿದ್ದು ಹೇಗೆ..?

ಗೋವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಸಾಲಿನಲ್ಲಿ ಕುಳಿತಿದ್ದ ‘ಕಾಂತಾರ’ ಖ್ಯಾತಿಯ ರಿಷಬ್ ಶೆಟ್ಟಿ ಅವರನ್ನು ಉದ್ದೇಶಿಸಿ ಮಾತನಾಡಿದ  ವೇಳೆ ‘ಕಾಂತಾರ ಚಾಪ್ಟರ್ 1’ರ ದೃಶ್ಯವನ್ನು ನೆನಪಿಸಿಕೊಂಡ ರಣವೀರ್, ಗುಳಿಗ ದೈವದ ಸಹೋದರಿ ಚೌಂಡಿಯನ್ನು “Female Ghost” ಎಂದು ಹೇಳಿದ್ದಾರೆ.  ಜೊತೆಗೆ ಕಣ್ಣುಗಳನ್ನು ತಿರುಗಿಸಿ, ನಾಲಿಗೆ ಹೊರಹಾಕಿ ವಿಚಿತ್ರವಾಗಿ ಕಿರುಚುವ ಮೂಲಕ ದೈವದ ಪಾತ್ರವನ್ನು ಅಣಕಿಸಿದ್ದಾರೆ. ತುಳುನಾಡಿನ ದೈವಾರಾಧನೆಯ ಬಗ್ಗೆ ಅವಹೇಳನಕಾರಿಯಾಗಿ ವರ್ತಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.

ರಣವೀರ್ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ದೈವವನ್ನು ದೆವ್ವ ಎಂದು ಕರೆದಿರುವುದು ತುಳುನಾಡಿನ ಸಂಸ್ಕೃತಿ ಹಾಗೂ ದೈವಾರಾಧನೆಗೆ ಮಾಡಿದ ಅವಮಾನ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ಸಭೆಯಲ್ಲಿ ಕುಳಿತಿದ್ದ ರಿಷಭ್‌ ಶೆಟ್ಟಿ ನಗುತ್ತಲೇ ಉತ್ತರಿಸಿದರು.

Bollywood actor Ranveer Singh apologizes to Rishabh Shetty..!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 171

You cannot copy content of this page