ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

ಪುತ್ತೂರು: ಗೋಸಾಗಾಟದ ವೇಳೆ ಕೆಟ್ಟು ಹೋದ ಕಾರು – ಇಬ್ಬರ ಬಂಧನ

ಪುತ್ತೂರು – ತುಳು ಟೈಮ್ಸ್:‌ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ವಾಹನ ಕೆಟ್ಟು ಹೋಗಿ, ಗೋವುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26ವ), ಅಬ್ದುಲ್ ಲತೀಫ್ (25ವ) ಬಂಧಿತರು.

ನ.29 ರಂದು ಬೆಳಗ್ಗೆ ನರಿಮೊಗರು ಗ್ರಾಮದ ಗಡಿಪಿಲ ನಡುರಸ್ತೆಯಲ್ಲಿ ಘಟನೆ ನಡೆದಿತ್ತು. ಮುಂಜಾನೆಯೇ ಐದು ಅಪರಿಚಿತ ಗೋವುಗಳು ನಡುರಸ್ತೆಯಲ್ಲಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಪಾಣಾಜೆ ನಿವಾಸಿಯಾಗಿರುವ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪ್ರೇಮ್‌ರಾಜ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಯಾರೋ ಗೋಳ್ಳರು ವಾಹನದಲ್ಲಿ ಗೋವುಗಳನ್ನು ಸಾಗಿಸುವ ವೇಳೆ, ವಾಹನ ರಸ್ತೆಯಲ್ಲಿ ಕೆಟ್ಟುಹೋಗಿದೆ. ವಾಹನದಲ್ಲಿದ್ದ ಗೋವುಗಳನ್ನು ನಡು ರಸ್ತೆಯಲ್ಲೇ ಬಿಟ್ಟು ಹೋದ ಶಂಕೆಯ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದರು.

ಇದನ್ನೂ ಓದಿ: ಕೆಂಪೇಗೌಡ ವಿಮಾನ‌ ನಿಲ್ದಾಣದಲ್ಲಿ ಹೊಸ ಕಾನೂನು : ಚಾಲಕರ ಜೇಬಿಗೆ ಕತ್ತರಿ

ಪ್ರಕರಣಕ್ಕೆ ಸಂಬಂಧಿಸಿ ಆಶಿಕ್ ಪಾಷಾ ಹಾಗೂ ಅಬ್ದುಲ್ ಲತೀಫ್ ಎಂಬವರನ್ನು ಬಂಧಿಸಲಾಗಿದೆ. ಗೋಸಾಗಾಟಕ್ಕೆ ಬಳಸಿದ್ದ ಕೆಎ 52 4889 ನೋಂದಣಿಯ ಇನ್ನೋವಾ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮವಾಗಿ 4 ಕರುಗಳನ್ನು ಹಾಗೂ ಒಂದು ದನವನ್ನು ಸಾಗಿಸುವ ವೇಳೆ ವಾಹನ ಹಾಳಾಗಿದೆ. ಈ ಹಿನ್ನಲೆ ಆರೋಪಿಗಳು ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ವಾಹನದೊಂದಿಗೆ ತೆರಳಿದ್ದಾಗಿ ತನಿಖೆಯಲ್ಲಿ ತಿಳಿದುಬಂದಿದೆ .

ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ವಶಕ್ಕೆ ಪಡೆದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Two arrested for illegally transporting cattle, abandoning animals by the side of road.   Tulu Times


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 34

You cannot copy content of this page