Bangaluru: ಪದೇ ಪದೇ ಎಲ್ಲೆಂದರಲ್ಲಿ ನಾಲಿಗೆ ಹರಿಬಿಡುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಈಗ ಮತ್ತೆ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕರು ಭಾರತದ ತಾಲಿಬಾನ್ ಇದ್ದಂತೆ ಎಂದಿದ್ದು ಅಸಂಖ್ಯ ಆರ್ಎಸ್ಎಸ್ ಕಾಯಕರ್ತರನ್ನು ಕೆರಳಿಸಿದೆ.
ಹರಿಪ್ರಸಾದ್ ಅವರು ಉದಾಹರಣೆಗೆ ತಮಿಳುನಾಡನ್ನು ಉಲ್ಲೇಖಿಸಿ, ತಮಿಳುನಾಡು ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಸಲು ಹೋದ ಆರ್ಎಸ್ಎಸ್ ಸದಸ್ಯರ ಮೇಲೆ ಸರ್ಕಾರ ಕ್ರಮ ಜರುಗಿಸಿದೆ. ಅವರನ್ನು ಬಂಧಿಸಿ ಕೇಸ್ಗಳನ್ನೂ ದಾಖಲಿಸಲಾಗಿದೆ. ಇದೇ ರೀತಿಯ ಕ್ರಮವನ್ನು ಕರ್ನಾಟಕದ ರಾಜ್ಯದಲ್ಲೂ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ರು.
ಅ. 12ರ ರವಿವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಸರಕಾರಿ ಆಟದ ಮೈದಾನದಲ್ಲಿ ಏನೇ ಚಟುವಟಿಕೆ ಮಾಡಿದರೂ ಅನುಮತಿ ಪಡೆಯಬೇಕು. ಆದರೆ, ಆರೆಸ್ಸೆಸ್ ಹಲವು ವರ್ಷಗಳಿಂದ ರಾಜ್ಯ-ದೇಶದಲ್ಲಿ ನಿರಂತರವಾಗಿ ಶಾಖೆಗಳನ್ನು ನಡೆಸುತ್ತಿದೆ. ಅಲ್ಲದೆ, ಪಥಸಂಚಲನದ ವೇಳೆ ಲಾಠಿ, ತಲ್ವಾರ್ ತಿರುಗಿಸಿಕೊಂಡು ಓಡಾಡುತ್ತಾರೆ. ಇಂತಹವರಿಗೆ ಏಕೆ ಅವಕಾಶ ನೀಡಬೇಕು, ಆರೆಸ್ಸೆಸ್ ನೋಂದಣಿಯಾಗದ ಸಂಘಟನೆಯಾಗಿದೆ.’’ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.
tulutimes ಯುಟ್ಯೂಬ್ ಚಾನೆಲ್ ವೀಕ್ಷಿಸಿ: www.youtube.com/@tulutimess
ಇದನ್ನೂ ಓದಿ: ‘RSS ನವರು ಭಾರತದ ತಾಲಿಬಾನಿಗಳು’ ಎಂದ ಬಿ.ಕೆ. ಹರಿಪ್ರಸಾದ್
‘ಆರೆಸ್ಸೆಸ್ ನೋಂದಣಿಯಾಗಿದ್ದರೆ ತೋರಿಸಬೇಕು. ಫೆಲೆಸ್ತೀನ್ ಪರ ಪ್ರತಿಭಟನೆ ಮಾಡಿದರೆ ಪೊಲೀಸರು ಅವರನ್ನು ಬಂಧಿಸುತ್ತಾರೆ. ಹೀಗಿರುವಾಗ ಆರೆಸ್ಸೆಸ್ ಶಾಖೆಗಳನ್ನು ನಡೆಸಲು ಪೊಲೀಸರು ಏಕೆ ಅವಕಾಶ ನೀಡುತ್ತಾರೆ. ತಮಿಳುನಾಡಿನಲ್ಲಿ ಶಾಲೆ-ಕಾಲೇಜುಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಡೆಸಿದ್ದಕ್ಕೆ ಕಾನೂನು ಕ್ರಮ ಜರುಗಿಸಿದ್ದಾರೆ’ ಎಂದು ಹರಿಪ್ರಸಾದ್ ತಿಳಿಸಿದರು.
ಇನ್ನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಸ್ಮರಿಸಿದ್ದಾರೆ. ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ಭಜರಂಗದಳದಂತಹ ಸಂಘಟನೆಗಳನ್ನು ನಿಷೇಧ ಮಾಡಲಾಗುತ್ತದೆ. ಅದರ ಭಾಗವಾಗಿ ಸರ್ಕಾರಿ ಜಾಗಗಳಲ್ಲಿ ನಡೆಯುವ ಸಂಘಟನೆಗಳ ಚಟುವಟಿಕೆಗಳ ಮೇಲೂ ನಿಗಾ ಇರಿಸಲಾಗುತ್ತದೆ ಎಂದು ಹೇಳಿದರು.
ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಬಿಕೆ ಹರಿಪ್ರಸಾದ್ ಹೇಳಿಕೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ರಾಷ್ಟ್ರೀಯತಾವಾದಿ ಸಂಘಟನೆಯನ್ನು ನಿಂದಿಸುತ್ತದೆ. ನಿಂದಿಸುವುದು ಕಾಂಗ್ರೆಸ್ನ ಚಾಳಿ. PFI ಮತ್ತು ಸೆಮಿಯಂತಹ ನಿಷೇಧಿತ ಮೂಲಭೂತವಾದಿ ಸಂಘಟನೆಗಳನ್ನು ಪ್ರೀತಿಸುತ್ತದೆ ಎಂದು ಬಿಜೆಪಿ ಹೇಳಿದೆ.











