ಮಂಗಳೂರು: Tulu Times| ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕನಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟಿಸಿ, ಶುಭ ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ, ಮಂಗಳಗಂಗೋತ್ರಿಯಲ್ಲಿ ನಾರಾಯಣಗುರು ಅಧ್ಯಯನ ಪೀಠ, ಮಂಗಳೂರು ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು – ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆಯನ್ನು ಉದ್ಘಾಟಿಸಿದ್ರು, ನಂತರ ಗುರುಗಳ ಜೀವನ ಸಂದೇಶ ಸ್ಮರಿಸಿದರು.
ಇದನ್ನೂ ಓದಿ: ಪುಂಜಾಲಕಟ್ಟೆ: ಹಾಡಹಗಲೇ ಮನೆಗೆ ನುಗ್ಗಿ ನಗ-ನಗದು ಕಳವು
ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ದೇರಳಕಟ್ಟೆ ಸಮೀಪದ ಕನಚೂರು ಕ್ಲಾಕ್ ಟವರ್ ವೃತ್ತವನ್ನು ಉದ್ಘಾಟಿಸಿದರು. ಈ ವೇಳೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಬಿ.ಜೆಡ್.ಝಮೀರ್ ಅಹ್ಮದ್ ಖಾನ್, ಕನಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ನ ಪ್ರತಿನಿಧಿಗಳು ಮುಂತಾದವರು ಹಾಜರಿದ್ದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಶುರುವಾಗಿದೆ. ಇನ್ನೊಂದೆಡೆ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಮಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ..ಡಿ.ಕೆ ಎಂದು ಕೂಗಿದ ಪ್ರಸಂಗ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣ ಇಂದು ನಡೆದಿದೆ.
ಇದನ್ನೂ ಓದಿ: ಅರಿಶಿಣ ಶಾಸ್ತ್ರದಲ್ಲಿ ಮಿಂಚಿದ ಕಿಚ್ಚ ಸುದೀಪ್ ಮಗಳು..ಫೋಟೋ ವೈರಲ್..!
ವೇಣುಗೋಪಾಲ್ ಎದುರೇ ಡಿ.ಕೆ..ಡಿ.ಕೆ ಎಂದು ಘೋಷಣೆ ಕೂಗಿದ ಬೆಂಬಲಿಗರು!
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಸಂಬಂಧಿಸಿದ ಗೊಂದಲಕ್ಕೆ ತೆರೆ ಬಿದ್ದಿದೆ ಅಂತ ಅಂದುಕೊಂಡಾಗಲೇ ಈ ಘಟನೆ ನಡೆದಿದ್ದು, ವೇಣುಗೋಪಾಲ್ ಮುಂದೆ ‘ಡಿ.ಕೆ..ಡಿ.ಕೆ’ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಮಂಗಳೂರು ವಿ.ವಿ ಯಲ್ಲಿ ಮಹಾತ್ಮ ಗಾಂಧಿ ನಾರಾಯಣ ಗುರು ಸಂವಾದದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ವೇಣುಗೋಪಾಲ್ ಅವರಿಗೆ ಸ್ವಾಗತ ಕೋರಲು ಬಂದ ಕಾರ್ಯಕರ್ತರು ಡಿ.ಕೆ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ವೇಣುಗೋಪಾಲ್ ಅವರಿಗೆ ದಾರಿ ಮಾಡಿಕೊಡಲು ಪೊಲೀಸರು ಶ್ರಮಪಟ್ಟರು. ಈ ವೇಳೆ ಕಾಂಗ್ರೆಸ್‌ನ ಹಿರಿಯ ಮುಖಂಡರು ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
cm-siddaramaiah-inaugurates-kanachur-clock-tower-circle-in-mangalore- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











