ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

ಉಪ್ಪಿನಂಗಡಿ: ಬಾಲಕಿಗೆ ಕಿರುಕುಳ – ಆರೋಪಿಯ ಬಂಧನ

ಉಪ್ಪಿನಂಗಡಿ – ತುಳು ಟೈಮ್ಸ್:‌ ಬಾಲಕಿಯನ್ನು ಹಿಂಬಾಲಿಸಿಕೊಂಡು ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು: ಮಾದಕವಸ್ತು ಮಾರಾಟಕ್ಕೆ ಯತ್ನ – ಓರ್ವನ ಬಂಧನ

ಪೆರಿಯಡ್ಕ ನಿವಾಸಿ ಮುಹಮ್ಮದ್ ಮುಸ್ತಫ (40) ಬಂಧಿತ ಆರೋಪಿ. ಈತ ಎರಡು ತಿಂಗಳುಗಳಿಂದ ಬಾಲಕಿಯನ್ನು ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದ. ನ.29ರಂದು ಬಾಲಕಿಯನ್ನು ಮನೆಗೆ ಕರೆದಿದ್ದಾನೆ ಎಂದು ಬಾಲಕಿಯ ಸಹೋದರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮುಹಮ್ಮದ್ ಮುಸ್ತಫ ಎಂಬಾತನನ್ನು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Man has been arrested allegedly harassment on minor girl in Uppinangady. Nabbed accused identified as Mohammed Mustafa (40). Tulu Times


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 34

You cannot copy content of this page