ಬ್ರೇಕಿಂಗ್ ನ್ಯೂಸ್
ಕಡಬಕರಾವಳಿ

ಕಡಬ: ತಡರಾತ್ರಿ ಮನೆಗೆ ಪ್ರವೇಶಿಸಿ ಹಲ್ಲೆಗೈದ ಆರೋಪ – ಕಾನ್ಸ್‌ಟೇಬಲ್‌ ಸಸ್ಪೆಂಡ್

ಕಡಬ ತುಳು ಟೈಮ್ಸ್‌: ಪೊಲೀಸ್‌ ಕಾನ್ಸ್‌ಟೇಬಲ್‌ ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಅಕ್ರಮ ಮನೆ ಪ್ರವೇಶ ಹಾಗೂ ಹಲ್ಲೆಗೈದ ಆರೋಪದ ಹಿನ್ನಲೆ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್‌ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕಡಬಾದ ಕೊಯಿಲ ನಿವಾಸಿ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿ ಅಕ್ರಮ ಪ್ರವೇಶಿಸಿದ್ದಾರೆ. ಈ ವೇಳೆ ಗಾಬರಿಗೊಂಡ ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದಾರೆ. ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬವರಿಗೆ ಹಲ್ಲೆ ಮಾಡಿದ್ದಾನೆ.

ಇದನ್ನೂ ಓದಿ: ರಿಷಭ್ ಶೆಟ್ಟಿ ಅವರನ್ನು ಅಪ್ಪಿ ಆಲಂಗಿಸಿ ಮಡಿಲಲ್ಲಿ ಮಲಗಿದ ಪಂಜುರ್ಲಿ ದೈವ

ಈ ವೇಳೆ ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಕಡಬ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ರಾಜು ನಾಯ್ಕ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

Kadaba: A Head Constable from Kadaba police station was suspended following his arrest for alleged unauthorised entry into a house and assault of an inmate in the house in Koila on Wednesday night. Tulu Times


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 33

You cannot copy content of this page