ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಬಂಟ್ವಾಳ

ಬಂಟ್ವಾಳದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಬಂಟ್ವಾಳ: Tulu Times | ಬಂಟ್ವಾಳದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಬುಧವಾರ ಬೆಳಗ್ಗೆ ಕೊಲ್ನಾಡು ಗ್ರಾಮದ ಕೂಡ್ತಮುಗೇರು ಎಂಬಲ್ಲಿ ಈ ಘಟನೆ ನಡೆದಿದೆ. ವಿಟ್ಲ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ರತ್ನಕುಮಾ‌ರ್ ಅವರು ಸಿಬ್ಬಂದಿಯೊಂದಿಗೆ ವಾಹನ ತಪಾಸಣೆ ಮಾಡುವಾಗ ಅಕ್ರಮ ಕೆಂಪುಕಲ್ಲು ಮಾರಾಟ ಮಾಡುವ ಗಾಡಿ ಪತ್ತೆಯಾಗಿದೆ.  KA-12-A-9095 ನೋಂದಣಿಯ ಲಾರಿ ಬೋಳದೆ ಕಡೆಯಿಂದ ಕೂಡ್ತಮುಗೇರು ಕಡೆಗೆ ಬರುತ್ತಿತ್ತು. ಈ ವೇಳೆ ಗಾಡಿಯನ್ನು ನಿಲ್ಲಿಸಿದ ಪೊಲೀಸರು ತಪಾಸಣೆ ನಡೆಸಿದ್ದಾರೆ,   ಈ ವೇಳೆ ಲಾರಿಯಲ್ಲಿ ಕೆಂಪು ಕಲ್ಲು ತುಂಬಿಸಿಕೊಂಡು ಸಾಗಿಸುತ್ತಿರುವುದು ಕಂಡುಬಂದಿದೆ. ಲಾರಿ ಚಾಲಕನನ್ನು ಹಾಗೂ ಲಾರಿಯನ್ನು ಲೋಡ್ ಸಮೇತ ವಶಕ್ಕೆ ಪಡೆಯಲಾಗಿದೆ. ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು,ಮುಂದಿನ ಕಾನೂನು ಕ್ರಮಕ್ಕೆ ಪರಿಶೀಲನೆ ನಡೆಸಲಾಗುತ್ತಿದೆ.

ತಡರಾತ್ರಿ ಮನೆಗೆ ಪ್ರವೇಶಿಸಿ ಹಲ್ಲೆ ಆರೋಪ – ಕಾನ್ಸ್‌ಟೇಬಲ್ ಸಸ್ಪೆಂಡ್!

ಪ್ರತ್ಯೇಕ ಪ್ರಕರಣಗಳಲ್ಲಿ ಕಡಬದಲ್ಲಿ ತಡಪೊಲೀಸ್ ಕಾನ್ಸ್‌ಟೇಬಲ್ ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಅಕ್ರಮ ಮನೆ ಪ್ರವೇಶ ಹಾಗೂ ಹಲ್ಲೆಗೈದ ಆರೋಪದ ಹಿನ್ನಲೆ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಡಬಾದ ಕೊಯಿಲ ನಿವಾಸಿ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿ ಅಕ್ರಮ ಪ್ರವೇಶಿಸಿದ್ದಾರೆ. ಈ ವೇಳೆ ಗಾಬರಿಗೊಂಡ ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದಾರೆ. ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯಚೇತನ್ ಎಂಬವರಿಗೆ ಹಲ್ಲೆ ಮಾಡಿದ್ದಾನೆ.  ಈ ವೇಳೆ ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಕಡಬ ಪೊಲೀಸ್ ಠಾಣೆಯ ಹೆಡ್ ಕಾನ್ನೇಬಲ್ ರಾಜು ನಾಯ್ಕ ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:‌ 2026 ರಲ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಿದ್ದಾರೆ ನಟ ಯಶ್

Lorry carrying red stone illegally seized in Bantwal- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 168

You cannot copy content of this page