ಬೆಂಗಳೂರು : Tulu Times | ನಾಲ್ಕು ದಿನದಲ್ಲಿ 600 ವಿಮಾನ ಕ್ಯಾನ್ಸಲ್ ಆಗಿ, ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮುಂದುವರಿದಿದೆ. ಪ್ರಯಾಣಿಕರ ಪರಿಸ್ಥಿತಿ, ಗೊಂದಲಗಳ ನಡುವೆ ಕೆಲವರು ಅಲ್ಲೇ ಆಕ್ರೋಶವನ್ನು ವ್ಯಕ್ತಪಡಿಸಿದರೂ ಸಮಸ್ಯೆ ಬಗೆಹರಿದಂತೆ ಕಾಣುತ್ತಿಲ್ಲ. ಏರ್‌ಪೋರ್ಟ್‌ನ ಆಗಮನ ದ್ವಾರಗಳು ಖಾಲಿಯಾಗಿವೆ. ವಿಮಾನಗಳಿಲ್ಲದ ಕಾರಣ ಟ್ಯಾಕ್ಸಿ ಹಾಗೂ ಬಿಎಂಟಿಸಿ ಬಸ್ ಚಾಲಕರು ಆದಾಯವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಏರ್‌ಪೋರ್ಟ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಇನ್ನೊಂದು ಕಡೆ ವಿಮಾನ ಹಾರಾಟದಲ್ಲಿ ವ್ಯತ್ಯಯದಿಂದ ವಧು ವರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಬುಧವಾರ ವಧು ಮೇಧಾ ಕ್ಷೀರಸಾಗರ ಹಾಗೂ ವರ ಸಂಗಮ ದಾಸ್ ಅವರ ಆರತಕ್ಷತೆ ಆಯೋಜಿಸಲಾಗಿತ್ತು. ನವೆಂಬರ್ 23ರಂದು ಭುವನೇಶ್ವರದಲ್ಲಿ ಮದುವೆಯಾದ ಈ ಜೋಡಿ, ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಹುಬ್ಬಳ್ಳಿಗೆ ಬರಲು ಡಿಸೆಂಬರ್ 2ರ ವಿಮಾನ ಬುಕ್ ಮಾಡಿದ್ದರು. ಏಕಾಏಕಿ ಡಿಸೆಂಬರ್ 3ರಂದು ಬೆಳಗ್ಗೆ ವಿಮಾನ ಸಂಚಾರವೇ ರದ್ದಾಯಿತು. ಪರಿಣಾಮವಾಗಿ ವಧು-ವರರು ಹುಬ್ಬಳ್ಳಿಗೆ ಆರಕ್ಷತೆ ವೇಳೆಗೆ ತಲುಪಲು ಸಾಧ್ಯವಾಗಲಿಲ್ಲ
.ವಧು ಮೇಧಾ ಮತ್ತು ವರ ಸಂಗಮ ದಾಸ್ ಇಬ್ಬರೂ ಭುವನೇಶ್ವರದಲ್ಲೇ ಸಿದ್ಧರಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರತಕ್ಷತೆಯಲ್ಲಿ ಭಾಗವಹಿಸುವ ಅನಿವಾರ್ಯ ಸ್ಥಿತಿ ಎದುರಾಯಿತು. ಇಂಡಿಗೋ ವಿಮಾನಗಳ ರದ್ದು ಮತ್ತು ವಿಳಂಬದಿಂದ ಅನೇಕರು ಪರದಾಡುತ್ತಿದ್ದರೆ, ಹುಬ್ಬಳ್ಳಿಯಲ್ಲಿ ನಡೆದ ಈ ವಿದ್ಯಮಾನ ಎಲ್ಲರ ಗಮನ ಸೆಳೆದು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಆರತಕ್ಷತೆಗೆ ಎಲ್ಲ ಸಿದ್ಧತೆ ನಡೆದಿದ್ದು, ಇನ್ನೇನು ಸಮಾರಂಭ ಶುರುವಾಗಬೇಕು. ಆದರೂ ವಧು ಹಾಗೂ ವರನ ಆಗಮನವಿಲ್ಲ. ಕೊನೆಗೆ ವಧುವಿನ ತಂದೆ ತಾಯಿಯೇ ವಧು-ವರರ ಕುರ್ಚಿಯಲ್ಲಿ ಕುಳಿತ ಬಂದ ಬಂಧುಗಳಿಂದ ಶುಭ ಹಾರೈಕೆ ಸ್ವೀಕರಿಸಿದರು.
Bride and groom’s reception held via video conference due to flight delays – ತುಳು ಟೈಮ್ಸ್
ಇದನ್ನೂ ಓದಿ :ರಿಷಭ್ ಶೆಟ್ಟಿ ಅವರನ್ನು ಅಪ್ಪಿ ಆಲಂಗಿಸಿ ಮಡಿಲಲ್ಲಿ ಮಲಗಿದ ಪಂಜುರ್ಲಿ ದೈವ
========
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/dOL6osnuj0U?si=Gegoqzsp73S9-fm0











