ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಗ್ರಾಮೀಣ ಜನರ ಆಸ್ತಿಗಳ ಭದ್ರತೆಗಾಗಿ ಇ-ಸ್ವತ್ತು ಅಭಿಯಾನ

ಇ – ಖಾತೆ : Tulu Times | ಇ – ಖಾತೆ ಬಗ್ಗೆ ಇನ್ನೂ ಅನೇಕ ಗ್ರಾಮೀಣ ಜನರಿಗೆ ಅರಿವು ಕಡಿಮೆ. ತಾಂತ್ರಿಕ ಜ್ಞಾನ ಕೊರತೆಯಿಂದಾಗಿ ಅರ್ಜಿ ಸಲ್ಲಿಸುವುದರಲ್ಲಿ, ದಾಖಲೆಗಳನ್ನು ಅಪ್ಲೋಡ್ ಮಾಡುವುದರಲ್ಲಿ ಮತ್ತು ಸ್ಥಿತಿಯನ್ನು ಪರಿಶೀಲಿಸುವುದರಲ್ಲಿ ತೊಂದರೆಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ, ಇಲಾಖೆ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಭೂಮಿ ಸಂಬಂಧಿತ ದಾಖಲೆಗಳು, ಹಕ್ಕು ಪತ್ರಗಳು ಮತ್ತು ಖಾತೆ ನೋಂದಣಿಗಳು ಅನೇಕ ವರ್ಷಗಳಿನಿಂದ ಸಂಕೀರ್ಣ ಪ್ರಕ್ರಿಯೆಯಾಗಿದ್ದವು. ದಾಖಲಾತಿಗಳ ಪರಿಶೀಲನೆ, ಕಚೇರಿಗಳ ಓಡಾಟ, ವಿಳಂಬ ಮತ್ತು ಮಾಹಿತಿ ಕೊರತೆ ಇವೆಲ್ಲವು ಸಾಮಾನ್ಯ ನಾಗರಿಕರಿಗೆ ದೊಡ್ಡ ತೊಂದರೆಯಾಗುತ್ತಿತ್ತು. ಈ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇ–ಖಾತೆ ಕುರಿತು ವಿಶೇಷ ಸಹಾಯವಾಣಿ ಆರಂಭಿಸಿದೆ.

ಇ–ಖಾತೆ ಎಂಬುದು ಭೂಮಿಯ ಸ್ವತ್ತು, ಹಕ್ಕು ಮತ್ತು ಮಾಲೀಕತ್ವಕ್ಕೆ ಸಂಬಂಧಿಸಿದ ಖಾತೆ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ನೋಂದಣಿ ಮಾಡುವ ವ್ಯವಸ್ಥೆ. ಇದರಿಂದ ಭೂಮಿ ದಾಖಲೆಗಳಲ್ಲಿ ಪಾರದರ್ಶಕತೆ, ವೇಗ ಮತ್ತು ವಿಶ್ವಾಸಾರ್ಹತೆ ಹೆಚ್ಚುತ್ತದೆ. ಗ್ರಾಮೀಣ ಪ್ರದೇಶದ ನಾಗರಿಕರು ಈಗ ತಮ್ಮ ಭೂಮಿ ದಾಖಲಾತಿಯನ್ನು ಆನ್‌ಲೈನ್ ಮೂಲಕ ಸುಲಭವಾಗಿ ಪರಿಶೀಲಿಸಬಹುದು.

ಮೂಲಸೌಕರ್ಯ ಒದಗಿಸುವುದು ಸರ್ಕಾರದ ಮುಖ್ಯ ಧ್ಯೇಯ ;

ಹೌದು…! ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ – ಖಾತಾ ಪಡೆಯುವುದು ಈಗ ಮತ್ತಷ್ಟು ಸುಲಭವಾಗಿದೆ. ಗೊಂದಲಗಳ ನಿವಾರಣೆಗೆ ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಸಹಾಯವಾಣಿ ಆರಂಭ ಮಾಡಲಾಗಿದೆ ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ಹಂಚಿಕೊಂಡಿದ್ದು, ಹಳ್ಳಿಗಳ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮೀಣ ಜನರ ಆಸ್ತಿಗಳ ಭದ್ರತೆಗಾಗಿ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಜೊತೆಗೆ, ನಮ್ಮ ಇಲಾಖೆಯಿಂದ ಇ-ಸ್ವತ್ತು ಸಹಾಯವಾಣಿ 9483476000 ಅನ್ನು ಪ್ರಾರಂಭಿಸಿದ್ದು ನಿಮ್ಮ ಯಾವುದೇ ಗೊಂದಲಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು ಎಂದಿದ್ದಾರೆ. E-Asset Campaign for the security of assets of rural people – ತುಳು ಟೈಮ್ಸ್

ಇದನ್ನೂ ಓದಿ :RBI ನಿಂದ 25 ಬೇಸಿಸ್ ಪಾಯಿಂಟ್ ರೆಪೋ ದರ ಕಡಿತ

========

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/B6prUvD0mUk?si=j3qFQIqwzfPGEAta

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page