ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಲೋಕಾಯುಕ್ತ ಇನ್ಸ್ ಪೆಕ್ಟರ್ ಭೀಕರ ರಸ್ತೆ ಅಪಘಾತದಲ್ಲಿ ಸಜೀವ ದಹನ

ಧಾರವಾಡ : Tulu Times | ಮಹಾತೇಂಶ್ ಬೀಳಗಿ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳುವ ಮುನ್ನವೇ ಇನ್ನೊಂದು ಆಘಾತಕಾರಿ ಅಪಘಾತವು ಸಂಭವಿಸಿದೆ. ದಕ್ಷ ಅಧಿಕಾರಿಗಳು ಈ ರೀತಿ ಅಪಘಾತದಲ್ಲಿ ಸಾವನ್ನಪ್ಪುವುದು ನಿಜಕ್ಕೂ ವಿಶಾದದ ವಿಚಾರ. ನಿನ್ನೆ ರಜೆ ಪಡೆದು ಊರಿಗೆ ತೆರಳುತ್ತಿದ್ದ ಲೋಕಾಯುಕ್ತ ಇನ್ಸ್ ಪೆಕ್ಟರ್ ಭೀಕರ ರಸ್ತೆ ಅಪಘಾತದಲ್ಲಿ ಸಜೀವ ದಹನವಾಗಿದ್ದಾರೆ. ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್​​ಪೆಕ್ಟರ್​​​ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಅಣ್ಣಿಗೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಗದಗದಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಪ್ರಯಾಣ ;

ಡಿವೈಡರ್​​ಗೆ ಡಿಕ್ಕಿಯಾಗಿ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್​ಪೆಕ್ಟರ್ ಸಾಲಿಮಠ ಅವರಿಗೆ ​​ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್​ಪೆಕ್ಟರ್​ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.

ಗದಗದಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಪ್ರಯಾಣ ನಡೆಸಿದ ಸಂದರ್ಭದಲ್ಲಿ ವಿಧಿ ಈ ರೀತಿಯಾಗಿ ಬಲಿ ತೆಗೆದುಕೊಂಡಿರುವುದು ನಿಜಕ್ಕೂ ಘೋರ ದುರಂತಕ್ಕೆ ಸಾಕ್ಷಿಯಾಗಿದೆ. ಇವರು ತಮ್ಮ ಸೃಜನಶೀಲ ಕೆಲಸದಿಂದ ಜನಮನ್ನಣೆಯನ್ನು ಗಳಿಸಿದ್ದರು. Lokayukta Inspector burnt alive in horrific road accident – ತುಳು ಟೈಮ್ಸ್

ಇದನ್ನೂ ಓದಿ :ನಿಮ್ಮ ದುಃಖಗಳನ್ನು ಕೇಳುವ ಕಿವಿಗಳಿಲ್ಲ ಅಂತ ಬೇಸರ ಕಾಡುತ್ತಿದೆಯಾ..?

======

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/B6prUvD0mUk?si=z48LSM-x4RglLr8V

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page