ಪುತ್ತೂರು – ತುಳು ಟೈಮ್ಸ್: ನಿಲ್ಲಿಸಿದ ಲಾರಿಯಿಂದ ಬರೋಬ್ಬರಿ 21 ಲಕ್ಷ ರೂ. ಮೌಲ್ಯದ ಕಾಫಿ ಬೀಜಗಳನ್ನು ಕಳವು ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಿರಿಯಾಪಟ್ಟಣದಿಂದ ಮಂಗಳೂರು ಬಂದರಿಗೆ ಕಾಫಿ ಬೀಜಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯಿಂದ ಕಾಫಿ ಬೀಜಗಳು ತುಂಬಿದ್ದ ಗೋಣಿಗಳು ಕಳವಾಗಿದೆ. ನೆಹರುನಗರ ಶೇವಿರೆ ನಿವಾಸಿ ತೃತೇಶ್ ಎಂಬವರು ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ.
ತೃತೇಶ್ ಅವರು ಮಂಗಳೂರು ಪಣಂಬೂರಿನ ಭವಾನಿ ಶಿಪ್ಪಿಂಗ್ ಸರ್ವಿಸ್ ಏಜೆನ್ಸಿ ಮೂಲಕ ಪಿರಿಯಾಪಟ್ಟಣದಿಂದ ಮಂಗಳೂರಿನ ಬಂದರಿಗೆ ಕಾಫಿ ಬೀಜಗಳನ್ನು ಟ್ರಾನ್ಸ್ಪೋರ್ಟ್ ಮಾಡಲು ಬುಕ್ಕಿಂಗ್ ಪಡೆದುಕೊಂಡಿದ್ದರು. ಹೀಗಾಗಿ ತನ್ನ ಲಾರಿಯಲ್ಲಿ ಪಿರಿಯಾಪಟ್ಟಣದ ಹೈರೇಂಜ್ ಕಾಫಿ ಕ್ಯೂರಿಂಗ್ ಹೌಸ್ ಕಂಪೆನಿಯಿಂದ ಡಿ.3ರಂದು 320 ಗೋಣಿ ಕಾಫಿ ಬೀಜಗಳನ್ನು ಲೋಡ್ ಮಾಡಿಕೊಂಡು ಬಂದಿದ್ದರು. ಮಂಗಳೂರು ಬಂದರಿಗೆ ಹೊರಟು ದಾರಿ ಮಧ್ಯೆ ರಾತ್ರಿ ನೆಹರುನಗರ ಬಳಿ ಲಾರಿಯನ್ನು ನಿಲ್ಲಿಸಿ ಮನೆಗೆ ಹೋಗಿದ್ದರು. ಡಿ.4ರಂದು ಬೆಳಗ್ಗೆ ಬಂದು ಮಂಗಳೂರಿಗೆ ಟ್ರಾನ್ಸ್‌ಪೋರ್ಟ್ ಮಾಡಿದ್ದರು.
ಮಂಗಳೂರು ಬಂದರಿನಲ್ಲಿ ಕಂಪೆನಿಯವರು ಕ್ಯಾಲಿಟಿ ಚೆಕ್ ಮಾಡಿದಾಗ ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡುಬಂದಿದೆ. ಬಳಿಕ ಕಂಪೆನಿಯ ಮೇಲ್ವಿಚಾರಕರು ಲಾರಿಯ ಹಿಂಬದಿಯ ಬಾಗಿಲು ತೆರೆದು ನೋಡಿದಾಗ ಲಾರಿಯಲ್ಲಿದ್ದ 320 ಗೋಣಿ ಕಾಫಿ ಬೀಜಗಳ ಪೈಕಿ 80 ಗೋಣಿ ಕಾಫಿ ಬೀಜ ಕಳವಾಗಿರೋದು ತಿಳಿದುಬಂದಿದೆ.
A case of theft of coffee beans worth Rs. 21 lakh from a parked lorry has been reported. A complaint has been registered at the Puttur City Police Station in this regard. – Tulu Times
ಇದನ್ನೂ ಓದಿ: 150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಕೋಣ ಇನ್ನಿಲ್ಲ
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











