ಬೆಂಗಳೂರು : Tulu Times | ಇಂಡಿಗೋ ವಿಮಾನ ವ್ಯತ್ಯಯದಿಂದ ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ಗಮನಿಸಿರುವಿರಿ. ಆದರೆ ಪೈಲಟ್ಗಳ ಕೊರತೆ ಮತ್ತು ಯೋಜನೆಯಲ್ಲಿನ ಲೋಪಗಳಿಂದಾಗಿ ಈ ಸಮಸ್ಯೆ ಉದ್ಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಕ್ಷಮೆ ಕೋರಿರುವ ಇಂಡಿಗೋ, ಡಿಸೆಂಬರ್ 10 ರಿಂದ 15ರ ವೇಳೆಗೆ ವಿಮಾನ ಹಾರಾಟ ಸಂಪೂರ್ಣ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಪ್ರತಿಕ್ರಿಯಿಸಿ, ಪರಿಸ್ಥಿತಿ ಸುಧಾರಿಸುವ ಹಂತದಲ್ಲಿದೆ ಎಂದು ಭರವಸೆ ನೀಡಿದ್ದಾರೆ.
ಕಳೆದ ಐದು ದಿನಗಳಿಂದ ಈ ವಿಮಾನಯಾನದ ಈ ಅವ್ಯವಸ್ಥೆಯಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಕಠಿಣ ಕ್ರಮಕ್ಕೆ ಮುಂದಾಗಿದೆ. ರದ್ದಾದ ಅಥವಾ ವ್ಯತ್ಯಯಗೊಂಡ ವಿಮಾನಗಳ ಪ್ರಯಾಣಿಕರಿಗೆ ಭಾನುವಾರ ಅಂದರೆ ನಾಳೆಯಿಂದ ರಾತ್ರಿ 8 ಗಂಟೆಯೊಳಗೆ ಸಂಪೂರ್ಣ ಹಣವನ್ನು ಮರುಪಾವತಿ ಮಾಡುವಂತೆ ಸಚಿವಾಲಯವು ಇಂಡಿಗೋ ಸಂಸ್ಥೆಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರಿಗೆ ತಕ್ಷಣವೇ ರೀಫಂಡ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಚಿವಾಲಯ ಸೂಚಿಸಿದೆ. ಇದರೊಂದಿಗೆ, ರದ್ದಾದ ವಿಮಾನಗಳಿಂದಾಗಿ ತಮ್ಮ ಪ್ರಯಾಣದ ದಿನಾಂಕವನ್ನು ಬದಲಾಯಿಸಿಕೊಳ್ಳುವ ಪ್ರಯಾಣಿಕರಿಂದ ಯಾವುದೇ ರೀತಿಯ ‘ಮರುನಿಗದಿ ಶುಲ್ಕ’ವನ್ನು ವಿಧಿಸಬಾರದು ಎಂದು ವಿಮಾನಯಾನ ಸಂಸ್ಥೆಗಳಿಗೆ ತಾಕೀತು ಮಾಡಲಾಗಿದೆ. ಒಂದು ವೇಳೆ ರೀಫಂಡ್ ನೀಡುವಲ್ಲಿ ವಿಳಂಬವಾದರೆ ಅಥವಾ ನಿಯಮ ಪಾಲಿಸದಿದ್ದರೆ ತಕ್ಷಣವೇ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.
48 ಗಂಟೆಯೊಳಗೆ ಪ್ರಯಾಣಿಕರ ಮನೆಗೆ ಅಥವಾ ಅವರು ಸೂಚಿಸಿದ ವಿಳಾಸಕ್ಕೆ ತಲುಪಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರಯಾಣಿಕರ ನೆರವಿಗಾಗಿ ಮೀಸಲಾದ ‘ಸಹಾಯ ಕೇಂದ್ರ’ಗಳನ್ನು ಸ್ಥಾಪಿಸಬೇಕು ಮತ್ತು ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಂಸ್ಥೆಯೇ ಪ್ರಯಾಣಿಕರನ್ನು ಸಂಪರ್ಕಿಸಬೇಕು ಎಂದು ಸೂಚಿಸಲಾಗಿದೆ. ಈ ಕಟ್ಟುನಿಟ್ಟಿನ ಶಿಸ್ತಿನ ಕ್ರಮದಿಂದ ಬಿಸಿ ಮುಟ್ಟಿದ ಇಂಡಿಗೋ ವಿಮಾನ ಸಂಸ್ಥೆಗೆ ಇನ್ನೂ ಪರಿಸ್ಥಿತಿ ಸುಧಾರಿಸಲು ಶೀಘ್ರ ಕ್ರಮಕೈಗೊಳ್ಳಲು ಅವಕಾಶ ನೀಡಲಾಗಿದೆ.
Union Civil Aviation Ministry takes strict action against flight disruptions – ತುಳು ಟೈಮ್ಸ್
ಇದನ್ನೂ ಓದಿ :ಪುತ್ತೂರು: ಬರೋಬ್ಬರಿ 21 ಲಕ್ಷ ರೂ. ಮೌಲ್ಯದ ಕಾಫಿ ಬೀಜ ಕಳವು
=======
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtube.com/shorts/k8odT-8iq_c?si=GeXiexVDN_Uwds6p











