ಗೋವಾ: Tulu Times | ಇಂದು ಪ್ರವಾಸಿಗರ ನೆಚ್ಚಿನ ತಾಣ ಗೋವಾದಲ್ಲಿ ಭೀಕರ ಅಗ್ನಿ ಅವಘಡದಲ್ಲಿ 23 ಮಂದಿ ಬಲಿ ಸಜೀವ ದಹನವಾಗಿರುವ ಘಟನೆ ನಡೆದಿದೆ.
ಗೋವಾದ ನೈಟ್ ಕ್ಲಬ್ನಲ್ಲಿ ಆಗಿದ್ದೇನು..?
ಗೋವಾದ ನೈಟ್ ಕ್ಲಬ್ ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವವಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪ್ರವಾಸಿಗರು ಹಾಗೂ ರೆಸ್ಟೋರೆಂಟ್ ಸಿಬ್ಬಂದಿಗಳು ಸೇರಿದಂತೆ 20 ಪುರುಷರು ಸಜೀವ ದಹನವಾಗಿದ್ದಾರೆ ಎಂಬ ಮಾಹಿತಿ ಇದೆ. ಕ್ಲಬ್ ಹಾಗೂ ರೆಸ್ಟೋರೆಂಟ್ ಧಗಧಗನೆ ಹೊತ್ತಿ ಉರಿದಿದ್ದು, ಪ್ರವಾಸಿಗರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ!
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್, ಸ್ಥಳವನ್ನು ಪರಿಶೀಲನೆ ನಡೆಸಿ, ಘಟನೆಗೆ ಕಾರಣಕರ್ತರಾದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಉತ್ತರ ಗೋವಾದ, ಅರ್ಪೋರಾ ದಲ್ಲಿರುವ ಬರ್ಚ್ ಬೈ ರೋಮಿಯೋ ಲೇನ್ ಎಂಬ ಕ್ಲಬ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೃತಪಟ್ಟಿರುವ ಮೃತದೇಹಗಳನ್ನು ಕ್ಲಬ್ ನಿಂದ ಹೊರತೆಗೆಯಲಾಗಿದೆ. ಈ ಬೆಂಕಿ ಹೊತ್ತಿಕೊಳ್ಳಲು ಮಧ್ಯರಾತ್ರಿ ಸುಮಾರಿಗೆ ಸಿಲಿಂಡರ್ ಸ್ಫೋಟವೇ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಕ್ಲಬ್ನ ಸಿಬ್ಬಂದಿಗಳೇ ಹೆಚ್ಚು ಬೆಂಕಿಗೆ ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಗ್ಯಾಸ್ ಸಿಲಿಂಡರ್ ಸ್ಪೋಟವೇ ದುರಂತಕ್ಕೆ ಕಾರಣ..?
ಬೆಂಕಿ ಮಧ್ಯರಾತ್ರಿ ಸುಮಾರಿಗೆ ಸಂಭವಿಸಿದೆ. ತಂಡಗಳು ರಕ್ಷಣೆ ಮತ್ತು ಸ್ಥಳಾಂತರ ಕಾರ್ಯದಲ್ಲಿ ತೊಡಗಿವೆ. ಹೆಚ್ಚಿನ ಮೃತದೇಹಗಳು ಅಡುಗೆಮನೆ ಸ್ಥಳದಲ್ಲಿ ಪತ್ತೆಯಾಗಿವೆ, ಇದು ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಬಲಿಯಾಗಿದ್ದಾರೆ ಎಂಬುದನ್ನು ಸೂಚಿಸುತ್ತದೆ. ಮೆಟ್ಟಿಲುಗಳ ಮೇಲೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಗೋವಾ ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಇಂದು ನಮಗೆಲ್ಲರಿಗೂ ಬಹಳ ನೋವಿನ ದಿನ. ಅರ್ಪೋರಾದಲ್ಲಿ ನಡೆದ ಈ ಭೀಕರ ಅಗ್ನಿ ಅವಘಡದಲ್ಲಿ 23 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಅನಿರೀಕ್ಷಿತ ನಷ್ಟದಲ್ಲಿ ದುಃಖಿತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ತಿಳಿಸುತ್ತೇನೆ. ಎಂದು ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ.
Fire tragedy at Goa nightclub: 23 people killed!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











