ಕರ್ನಾಟಕ: Tulu Times | ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು,
ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹೈಕೋರ್ಟ್‌ನಲ್ಲಿ ಪ್ರಕರಣ ಹೀಗೆ ಹಲವು ಕಾರಣಗಳಿಂದ ಕೆಎಸ್‌ಸಿಎ ಚುನಾವಣೆ ಭಾರಿ ಪೈಪೋಟಿ ಎದುರಿಸಿತ್ತು.
ಇದನ್ನೂ ಓದಿ: ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ ಹೇಳಿದ್ದೇನು..?
ಒಂದೆಡೆ ಮಾಜಿ ದಿಗ್ಗಜ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಬಣ ಮತ್ತೊಂದೆಡೆ ಕೆಎನ್ ಶಾಂತಕುಮಾರ್ ಬಣ ಇತ್ತು. ಇಂದಿನ ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಬಣ ಗೆಲುವು ಸಾಧಿಸಿದೆ. ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆಗೆ ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ನಟ ಪವನ್ ಕಲ್ಯಾಣ್ ಗೆ ಅಭಿನವ ಕೃಷ್ಣದೇವರಾಯ ಬಿರುದು ಪ್ರದಾನ
ವೆಂಕಟೇಶ್ ಪ್ರಸಾದ್ ಜಯಭೇರಿ ಸಾಧಿಸಿದ್ದು, 20 ಸುತ್ತುಗಳ ಮತದಾನ ಎಣಿಕೆ ಪ್ರಕ್ರಿಯೆಯಲ್ಲಿ ವೆಂಕಟೇಶ್ ಪ್ರಸಾದ್ 749 ಮತಗಳಿಂದ ಗೆದ್ದಿದ್ದಾರೆ. ಕೆಎಸ್‌ಸಿಎ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಕೆಎನ್ ಶಾಂತಕುಮಾರ್ 558 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. 191 ಮತಗಳಿಂದ ವೆಂಕಟೇಶ್ ಪ್ರಸಾದ್ ಗೆದ್ದಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಮಿಟ್ಟಿ ಬೆಕ್ಕಿನ ಮಾಯಾ ಸಾಹಸ : ಮಕ್ಕಳ ವಾರದ ಕಥೆ
ಕೆಎಸ್‌ಸಿಎ ಇತಿಹಾಸದಲ್ಲಿಇದು ಎರಡನೇ ದಾಖಲೆ ಮತದಾನವಾಗಿದೆ. ಈ ಬಾರಿ 1315 ಮತ ಚಲಾವಣೆಯಾಗಿದೆ. ಇದು ಇದುವರೆಗಿನ ಎರಡನೇ ಗರಿಷ್ಠ ಮತದಾನವಾಗಿದೆ. ಇದಕ್ಕೂ ಮೊದಲು 2013ರಲ್ಲಿ 1351 ಮತದಾನವಾಗಿತ್ತು. ಬೆಳಗ್ಗೆಯಿಂದ ಸಂಜೆ 7 ಗಂಟೆ ವರೆಗೆ ಮತದಾನ ಪ್ರಕ್ರಿಯೆ ನಡೆದಿತ್ತು. ಈ ಸಲ ಕರ್ನಾಟಕ ರಾಜ್ಯ ಸಂಸ್ಥೆ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿದೆ. 1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ವೆಂಕಟೇಶ್ , ಟೀಂ ಇಂಡಿಯಾದ ಯಶಸ್ವಿ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. 33 ಟೆಸ್ಟ್ ಪಂದ್ಯದಿಂದ 96 ವಿಕೆಟ್ ಕಬಳಿಸಿದ್ದರೆ, 161 ಏಕದಿನ ಪಂದ್ಯದಿಂದ 196 ವಿಕೆಟ್ ತೆಗೆದಿದ್ದಾರೆ. ಇದೀಗ 12 ವರ್ಷಗಳ ಬಳಿಕ ವೆಂಕಟೇಶ್ ಪ್ರಸಾದ್ ಮತ್ತೆ ಅಧ್ಯಕ್ಷರಾಗಿ ಕೆಎಸ್‌ಸಿಎಗೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ನಿಮ್ಮ ಯೋಗ್ಯತೆ ಬಗ್ಗೆ ಪ್ರಶ್ನೆ ಮಾಡ್ತಾರಾ..? ಸಿಂಪಲ್ ಹೀಗೆ ಮಾಡಿ ಸಾಕು!
Venkatesh Prasad appointed as Karnataka State Cricket Association President- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











