ಬ್ರೇಕಿಂಗ್ ನ್ಯೂಸ್
ಕರ್ನಾಟಕಕ್ರೀಡೆ

ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ ದಂಪತಿ

ಕರ್ನಾಟಕ: Tulu Times | ಸಿಂಹಾಚಲಂನಲ್ಲಿರುವ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ವಿರಾಟ್ ಕೊಹ್ಲಿ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಳಪೆ ಫಾರ್ಮ್‌ನಲ್ಲಿದ್ದ ವಿರಾಟ್ ಕೊಹ್ಲಿ ಟೀಕೆಗೆ ಗುರಿಯಾಗಿದ್ದರು.  ಸೌತ್ ಆಫ್ರಿಕಾ ವಿರುದ್ದದ ಏಕದಿನ ಸರಣಿಯನ್ನು ಭಾರತ 2-1 ಅಂತರದಲ್ಲಿ ಗೆದ್ದುಕೊಂಡಿದೆ. ವಿರಾಟ್ ಕೊಹ್ಲಿ ತಮ್ಮ ಕಳಪೆ ಫಾರ್ಮ್‌ನಿಂದ ಹೊರಬಂದಿದ್ದಾರೆ. ವಿರಾಟ್‌  ಕೊಹ್ಲಿ ತಮ್ಮ ಸಂಕಷ್ಟ ಸಮಯದಿಂದ ಹೊರಬಂದ ನಂತರ ವಿಶಾಖಪಟ್ಟಣಂನ ಸಿಂಹಾಚಾಲ ದೇವಸ್ಥಾನಕ್ಕೆ ಭೇಟ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ತನ್ನ ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದಾರೆ. ಇನ್ನು ಕೊಹ್ಲಿ ಜೊತೆಗೆ ಟೀಂ ಇಂಡಿಯಾ ಕೆಲ ಆಟಗಾರರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.  ದೇವಾಲಯದ ಮಂದಿ ವಿರಾಟ್ ಕೊಹ್ಲಿಯನ್ನು ಆತ್ಮೀಯವಾಗಿ ಬರಮಾಡಿಕೊಂಡು ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ.

ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ  ಸಂಕಷ್ಟ ನಿವಾರಣೆಗೂ ಪ್ರಸಿದ್ಧಿಯಾಗಿದೆ.   ವಿರಾಟ್ ಕೊಹ್ಲಿ ಸೌತ್ ಆಫ್ರಿಕಾ ವಿರುದ್ದ ಹೋರಾಟ ನೀಡಿದ ಭಾರತದ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ವಾಶಿಂಗ್ಟನ್ ಸುಂದರ್ ಸೇರಿದಂತೆ ಇತರ ಸದಸ್ಯರ ಜೊತೆ ವರಾಹ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ವಿರಾಟ್ ಕೊಹ್ಲಿ ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡಿದ್ದು, ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ತಮ್ಮ ವೃತ್ತಿಜೀವನದ ಕೊನೆಯ ಹಂತದಲ್ಲೂ ತಮ್ಮ ಫಿಟ್ನೆಸ್ ಮತ್ತು ಆಟದ ಕೌಶಲ್ಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ವರ್ಷ ಕೊಹ್ಲಿ 65ರ ಸರಾಸರಿಯಲ್ಲಿ 651 ರನ್ ಸಿಡಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ದದ ಮೂರು ಏಕದಿನ ಪಂದ್ಯಗಳಿಂದ  ಕೊಹ್ಲಿ 117.05ರ ಸ್ಟ್ರೈಕ್‌ರೇಟ್‌ನಲ್ಲಿ 302 ರನ್ ಸಿಡಿಸಿದ್ದಾರೆ. ಕೊಹ್ಲಿ ಭಾರತದ ಈ ವರ್ಷದ ಟಾಪ್ ಸ್ಕೋರರ್ ಆಗಿದ್ದಾರೆ. ಸೌತ್ ಆಫ್ರಿಕಾ ವಿರುದ್ದ ಎರಡು ಸೆಂಚುರಿ ಸಿಡಿಸುವ ಮೂಲಕ ಕೊಹ್ಲಿ 2025ರ ಸಾಲಿನ ಏಕದಿನ ಪಂದ್ಯಗಳಲ್ಲಿ ಗರಿಷ್ಠ ರನ್ ಸಿಡಿಸಿದ ಟೀಂ ಇಂಡಿಯಾ ಕ್ರಿಕೆಟಿಗನಾಗಿದ್ದಾರೆ.

Virat Kohli and his wife offer special prayers at Simhachalam temple- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 157

You cannot copy content of this page