ಮಂಗಳೂರು – ತುಳು ಟೈಮ್ಸ್: ಮಾದಕವಸ್ತು ಎಂಡಿಎಂಎ ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೂಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಂಧಿಸಲಾಗಿದ್ದು, ಆರೋಪಿಗಳಿಂದ ಬರೋಬ್ಬರಿ ₹ 50 ಲಕ್ಷ ಮೌಲ್ಯದ 517.76 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ಬ್ರಹ್ಮರಕೊಟ್ಲುವಿನ ನಿಸಾರ್ ಅಹಮ್ಮದ್ ಅಲಿಯಾಸ್ ನಿಸಾರ್ , ಬೈಂದೂರು ನಾವುಂದ ಗ್ರಾಮದ ಮೊಹಮ್ಮದ್ ಶಿಯಾಬ್ ಅಲಿಯಾಸ್ ಶಿಯಾಬ್, ಉಳ್ಳಾಲದ ನರಿಂಗಾನ ಗ್ರಾಮದ ಮೊಹಮ್ಮದ್ ನೌಷದ್ ಅಲಿಯಾಸ್ ನೌಷದ್, ಮಂಗಳೂರು ಕಸಬಾ ಬೆಂಗ್ರೆಯ ಇಮ್ರಾನ್ ಅಲಿಯಾಸ್ ಇಂಬ ಬಂಧಿತರು,
‘ಮಂಗಳೂರು-ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ಮುಲ್ಕಿ ಬಳಿಯ ಸುಂದರಾಮ್ ಶೆಟ್ಟಿ ಕನ್ವೆನ್ಸನ್ ಹಾಲ್ ಸಮೀಪ ಆರೋಪಿಗಳು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದಾರೆ. ಈ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ತಂಡವು ನಾಲ್ವರನ್ನು ಬಂಧಿಸಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಮಾರುತಿ ಫ್ರಾಂಕ್ಸ್ ಕಾರು, ಐದು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅವರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
‘ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡಲು ಈ ಕೃತ್ಯ ಎಸಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಮಾದಕ ವಸ್ತುವನ್ನು ಬೆಂಗಳೂರಿನಲ್ಲಿ ವಾಸವಿರುವ ನೈಜೀರಿಯಾ ಪ್ರಜೆಯಿಂದ ಖರೀದಿಸಿ ತಂದಿರುವುದಾಗಿ ತಿಳಿಸಿದ್ದಾರೆ’ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯ ಸೆಕ್ಷನ್ 22(ಸಿ) ಮತ್ತು 21(ಸಿ) ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 3(5) ಅಡಿ ಪ್ರಕರಣ ದಾಖಲಾಗಿದೆ.
The Mangaluru Central Crime Branch (CCB) police on Saturday arrested four persons who were allegedly attempting to sell over half a kg of MDMA worth ₹50 lakh to students and youngsters across the city.
ಇದನ್ನೂ ಓದಿ: ಗೋವಾ ನೈಟ್ ಕ್ಲಬ್ ನಲ್ಲಿ ಮೃತರಾದ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











