ಸುರತ್ಕಲ್ – ತುಳು ಟೈಮ್ಸ್: 11 ವರ್ಷದ ಬಾಲಕನನ್ನು ಕೈ-ಕಾಲು ಕಟ್ಟಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ನಡೆಸುತ್ತಿದ್ದ ಮೊಹಮ್ಮದ್ ಇಸ್ಮಾಯೀಲ್ ಬಂಧಿತ ಆರೋಪಿ.
ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಕ್ಸೊ ಕಾಯ್ದೆಯಡಿ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ಪೇಟೆಯಲ್ಲಿ ಜನರಲ್ ಸ್ಟೋರ್ ನಡೆಸಿಕೊಂಡಿರುವ ಇಸ್ಮಾಯೀಲ್ ತನ್ನ ಅಂಗಡಿಗೆ ಚಾಕಲೇಟು ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕನ ತಾಯಿ ಕೇಸು ಆರೋಪಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕಲಂ 4, 6 ಪೊಕ್ಸೊ ಹಾಗೂ 351(2), 117(2) ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Surathkal: ಫolice have arrested a man for giving se*xual harassment to a minor boy and have registered a POCSO case against him. The arrested accused is Mohammad Ismail, owner of Hani Fashion Shop & General Store located near Chokkabettu Jumma Masjid in Surathkal. – Tulu Times
ಇದನ್ನೂ ಓದಿ: ಕಡಬ: ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ? ಆಶಾ ತಿಮ್ಮಪ್ಪ ಹೆಸರಲ್ಲಿ ಫೇಕ್ ಫೋಸ್ಟರ್ ವೈರಲ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











