ಬೆಳಗಾವಿ : Tulu Times | ಭಾರತದಲ್ಲಿ ಶಿಕ್ಷಣವು ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಅತ್ಯಂತ ಮುಖ್ಯವಾದ ಹಾದಿಯಾಗಿದೆ. ವಿಶೇಷವಾಗಿ ಗ್ರಾಮೀಣ ಮತ್ತು ಹಿಂದುಳಿದ ಭಾಗಗಳಲ್ಲಿ ಸರ್ಕಾರಿ ಶಾಲೆಗಳು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣದ ಏಕೈಕ ಮೂಲವಾಗಿವೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಲವು ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುವುದು ಹಾಗೂ ಕೆಲವು ಶಾಲೆಗಳು ಮುಚ್ಚಲ್ಪಡುವುದು ಗಮನ ಸೆಳೆಯುವ ವಿಚಾರವಾಗಿದೆ.
2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಪರಿಷತ್ ನಲ್ಲಿ ಡಿ.8ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ, ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಉತ್ತಮ ಕಲಿಕೆ, ಉಜ್ವಲ ಭವಿಷ್ಯ ಎಂಬುದು ಕೆ.ಪಿ.ಎಸ್. ಶಾಲೆಗಳ ಧೈಯ ವಾಕ್ಯವಾಗಿದ್ದು, ಪ್ರತಿ ಮಗುವೂ ಶಾಲೆಯಲ್ಲಿರಬೇಕು ಮತ್ತು ಚೆನ್ನಾಗಿ ಕಲಿಯಬೇಕು ಎಂಬ ಮಹತ್ತರ ಉದ್ದೇಶದಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು ಏಕರೂಪದ ನೀತಿಯನ್ನು ಪಾಲಿಸುವಂತೆ ‘ಕರ್ನಾಟಕ ಪಬ್ಲಿಕ್ ಶಾಲಾ ಮಾನಕಗಳು ಕೈಪಿಡಿಯನ್ನು ಸಿದ್ಧಪಡಿಸಲಾಗಿದ್ದು, ಅದರಲ್ಲಿ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳಂತೆ ಪ್ರತಿ ಶಾಲೆಯಲ್ಲಿ ಕನಿಷ್ಠ 1200 ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಸಮರ್ಪಕ ಶೈಕ್ಷಣಿಕ ಮತ್ತು ಭೌತಿಕ ಸೌಕರ್ಯಗಳನ್ನು ಒದಗಿಸಿ ಉನ್ನತೀಕರಿಸಲಾಗುವುದು ಎಂದು ತಿಳಿಸಿದರು.
ಸರಕಾರಿ ಶಾಲೆಯಲ್ಲಿ ಇನ್ನು ಮುಂದೆ ಒಬ್ಬ ವಿದ್ಯಾರ್ಥಿಯಿದ್ದರೂ ಆ ಶಾಲೆ ನಡೆಯುತ್ತದೆ ಎಂಬುದಾಗಿ ಕಡಕ್ ಉತ್ತರವನ್ನು ಸಚಿವ ಮಧು ಬಂಗಾರಪ್ಪ ಹೇಳಿದ್ದು, ಇನ್ನು ಮುಂದೆ ಯಾರೇ ತಾತ್ಸಾರವಾಗಿ ಸರ್ಕಾರಿ ಶಾಲೆಯ ಬಗ್ಗೆ ಏನೇ ಮಾತನಾಡಿದರು ಈ ಬಗ್ಗೆ ಉತ್ತರ ನೀಡಿರುವುದು ಉತ್ತಮ ನಡೆಯಾಗಿದೆ. Government schools can function even if there is only one student: Minister Madhu Bangarappa – ತುಳು ಟೈಮ್ಸ್
ಇದನ್ನೂ ಓದಿ :ಅಡಿಕೆ ಬೆಳೆಗಾರರಿಗೆ ಪ್ರಯೋಜನಕ್ಕೆ ಬಾರದ ಬೆಳೆ ವಿಮೆ! ಸಂಕಷ್ಟಕ್ಕೆ ಧ್ವನಿಯಾದ ಪುತ್ತಿಲ
======
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/BjWZAp2yge4?si=PcjquUDs19m7iZKl











