ಬೆಳಗಾವಿ : Tulu Times | ಗರ್ಭಿಣಿಯಾಗುವುದು, ಮಗು ಜನಿಸುವುದು ಒಂದು ಸಂತೋಷದ ಕ್ಷಣ. ಆದರೆ ಕೆಲವು ಸಂದರ್ಭಗಳಲ್ಲಿ ತಾಯಿ ಅಥವಾ ಮಗುವಿನ ಆರೋಗ್ಯಕ್ಕೆ ಅಪಾಯ ಉಂಟಾದರೆ, ಆಸ್ಪತ್ರೆಗಳಲ್ಲಿ ಸಿಸೇರಿಯನ್ ಹೆರಿಗೆಯನ್ನು ಮಾಡುತ್ತಾರೆ. ಇದು ಅತ್ಯಂತ ವಿಶ್ವಾಸಾರ್ಹ ಮತ್ತು ಸುರಕ್ಷಿತ ವಿಧಾನವಾಗಿ ಪರಿಣಮಿಸಿದೆ. ವೈದ್ಯಕೀಯ ತಂತ್ರಜ್ಞಾನ, ಪರಿಣಿತ ವೈದ್ಯರು ಮತ್ತು ಅಭಿವೃದ್ಧಿಯಾದ ಶಸ್ತ್ರಚಿಕಿತ್ಸಾ ಮೂಲಸೌಕರ್ಯಗಳೊಂದಿಗೆ, ಇಂದಿನ ಆಸ್ಪತ್ರೆಗಳು ಸಿಸೇರಿಯನ್ ಹೆರಿಗೆಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿವೆ.
ಈ ಸಂಬಂಧ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು. ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ ಹಾಗೂ ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಈ ಬಗ್ಗೆ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ. ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕ್ರಮ ಜರುಗಿಸಲಾಗುವುದು ;
ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು, ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್ 15 ಉಪಬಂಧ 1ರ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಹಾಗಾಗಿ ಇನ್ನು ಮುಂದೆ ಸಿಸೇರಿಯನ್ ಮಾಡುವ ಮುನ್ನ ಅಪಾಯವಿದ್ದರೆ ಮಾತ್ರ ಮುಂದು ಹೋಗಬೇಕೆಂಬುದು ಇಲ್ಲದಿದ್ದರೆ ಸುಮ್ಮಸುಮ್ಮನೆ ಸಿಸೇರಿಯನ್ ಮಾಡುವ ಹಾಗಿಲ್ಲ ಎನ್ನುವ ವಿಷಯವನ್ನು ಖಾತ್ರಿ ಮಾಡಲಾಗಿದೆ. Cesarean sections cannot be performed in the state to recover money: Minister Dinesh Gundu Rao – ತುಳು ಟೈಮ್ಸ್
ಇದನ್ನೂ ಓದಿ :ಎ.ಐ. ತಂತ್ರಜ್ಞಾನ ಬಳಸಿ ವಿದ್ಯುತ್ ಕಳ್ಳತನಕ್ಕೆ ತಡೆ
======
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/BjWZAp2yge4?si=PcjquUDs19m7iZKl











