ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸೋದರ ಹಿಂದೆ ಸರಕಾರಕ್ಕೆ ಆರ್ಥಿಕ ಲಾಭವಿರುತ್ತಾ ?

ಬೆಳಗಾವಿ : Tulu Times | ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ನೀಡಿದ ತಮ್ಮ ಉತ್ತರದಲ್ಲಿ ಪರೀಕ್ಷಾ ಪ್ರಾಧಿಕಾರದ ಬಗ್ಗೆ ಮಾತನಾಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ.

ಆಧುನಿಕ ತಂತ್ರಜ್ಞಾನ ಬಳಕೆ ಮಾಡುವುದು ಅನಿವಾರ್ಯ ;

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು ಪ್ರಾಧಿಕಾರಕ್ಕೆ ತೆಗೆದುಕೊಂಡು ಬರುವುದು, ಪರೀಕ್ಷಾ ಕಾರ್ಯಗಳಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗೆ ಗೌರವಧನ ಭರಿಸುವುದು ಮುಂತಾದ ಎಲ್ಲಾ ವೆಚ್ಚಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಭರಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿನ ಪಾರದರ್ಶಕವಾಗಿ ನಡೆಸಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡುವುದು ಅನಿವಾರ್ಯವಾಗಿದ್ದು, ಅರ್ಜಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕದಲ್ಲಿ ಎಲ್ಲಾ ವೆಚ್ಚಗಳನ್ನು ನಿಭಾಯಿಸುವುದು ಕಷ್ಟಸಾಧ್ಯವಾಗುತ್ತಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2022ನೇ ವರ್ಷದಿಂದ ಇಷ್ಟೇ ನಿಗದಿ ಶುಲ್ಕವನ್ನು ವಿಧಿಸುತ್ತಿದ್ದು, ಪರೀಕ್ಷೆ ನಡೆಸುವ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾದರೂ ಸಹ ಬಡ ಹಾಗೂ ಗ್ರಾಮೀಣ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಶುಲ್ಕವನ್ನು ಹೆಚ್ಚಿಸಿರುವುದಿಲ್ಲ ಹಾಗೂ ಆರ್ಥಿಕ ಹೊರೆ ತಪ್ಪಿಸಲು ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ ಮೊದಲ ಹುದ್ದೆಗೆ ಮಾತ್ರ ಅವರಿಗೆ ಅನ್ವಯಿಸುವ ಪೂರ್ಣ ಅರ್ಜಿ ಶುಲ್ಕ ಪಾವತಿಸಲು ಹಾಗೂ ಹೆಚ್ಚುವರಿ ಹುದ್ದೆಗೆ ಕೇವಲ ರೂ.100 ವಿಧಿಸಲಾಗುತ್ತಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಯಾವುದೇ ಆರ್ಥಿಕ ಲಾಭ ಇರುವುದಿಲ್ಲ ;

ಅಭ್ಯರ್ಥಿಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಿಲ್ಲದೆ ಪ್ರಾಧಿಕಾರವು ಪರೀಕ್ಷೆಯನ್ನು ನಡೆಸಲು ಕನಿಷ್ಠ ಮೊತ್ತವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ಶುಲ್ಕ ಪಡೆಯುವುದು ಅನಿವಾರ್ಯವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಯಾವುದೇ ಆರ್ಥಿಕ ಲಾಭ ಇರುವುದಿಲ್ಲ. ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗುತ್ತಿಲ್ಲ. ಆದ್ದರಿಂದ, ಕೇಂದ್ರ ಅಥವಾ ರಾಜ್ಯ ಲೋಕಸೇವಾ ಆಯೋಗದ ಮಾದರಿಯಲ್ಲಿ ಶುಲ್ಕ ವಿಧಿಸಲು ಸಾಧ್ಯವಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ. Is there any financial benefit to the government behind conducting competitive exams? – ತುಳು ಟೈಮ್ಸ್

ಇದನ್ನೂ ಓದಿ : ವಾಟ್ಸಾಪ್ ಸ್ಟೇಟಸ್ ಹಾಕಿಲ್ಲ ಅಂತ ನೊಂದಿಕೊಳ್ತಿದ್ದೀರಾ..? ಹಾಗಾದ್ರೆ ಹುಷಾರ್!

====

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtube.com/shorts/5kSGc55JoJ0?si=7rDxGXXGJs-tc7ax

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 154

You cannot copy content of this page