ಮಂಗಳೂರು – ತುಳು ಟೈಮ್ಸ್ : ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಮರಸ್ಯ ಕೆಡಿಸುವ ಪೋಸ್ಟ್ ಹರಿಬಿಟ್ಟು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಿಮಾನ ನಿಲ್ದಾಣದಿಂದಲೇ ಬಂಧಿಸಲಾಗಿದೆ. ಮುಂಬೈನ ಚಾರ್ಕೋಪ್ ನಿವಾಸಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಬಂಧಿತ ಆರೋಪಿ.
2024ರ ಫೆಬ್ರವರಿ ತಿಂಗಳಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಎಡ್ವರ್ಡ್ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟು ಸಾಮರಸ್ಯ ಕೆಡಿಸುವ ಯತ್ನ ಮಾಡಿದ್ದ. ಈ ಕೋಮದ್ವೇಷದ ಪೋಸ್ಟ್ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿದೇಶದಲ್ಲಿ ಅಡಗಿದ್ದ ಆರೋಪಿಯನ್ನು ಇದೀಗ ವಾಪಾಸ್ ಆಗುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ: ರಿಷಭ್ ಹರಕೆ; ನಿಯಮ ಮೀರಿದ ದೈವ ನರ್ತಕನ ವಿರುದ್ಧ ತುಳುನಾಡು ದೈವಾರಾಧಕರು ಅಸಮಾಧಾನ!
ಫೆಲಿಕ್ಸ್ ಎಡ್ವರ್ಡ್ ಅವಹೇಳನ ಪೋಸ್ಟ್ ಮಾಡಿದ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ ನಂಬ್ರ-29/2024 ಕಲಂ 153(ಎ), 504, 507, 509 ಐಪಿಸಿ & ಕಲಂ 66(ಡಿ) ಐ.ಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಾಗಿತ್ತು. ವಿದೇಶದಲ್ಲಿದ್ದುಕೊಂಡೇ ಕೋಮು ಸಾಮರಸ್ಯ ಕೆಡಿಸುವ ಪೋಸ್ಟ್ ಮಾಡಿದ್ದ. ಹೀಗಾಗಿ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಬಳಿಕ ಫೆಲಿಕ್ಸ್ ಸೌದಿಯಲ್ಲಿ ಉದ್ಯೋಗದಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಆರೋಪಿ ವಿರುದ್ಧ ಲುಕ್ ಔಟ್ ಸರ್ಕುಲರ್ ಹೊರಡಿಸಲಾಗಿತ್ತು.
ಆರೋಪಿ ಫೆಲಿಕ್ಸ್ ಮುಂಬೈನ ಸಹರಾ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದು ಇಳಿದ ತಕ್ಷಣವೇ ಇಮಿಗ್ರೇಶನ್ ಅಧಿಕಾರಿಗಳು ತಡೆಹಿಡಿದಿದ್ದಾರೆ. ದಸ್ತಗಿರಿ ಮಾಡಿ ತನಿಖೆಗೆ ಒಳಪಡಿಸಿ, ಆನಂತರ, ಕಂಕನಾಡಿ ಪೊಲೀಸರು ಮಂಗಳೂರಿಗೆ ಕರೆತಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯ ಪಾಸ್ ಪೋರ್ಟ್ ಮುಟ್ಟುಗೋಲು ಹಾಕಲು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. . ಈ ಪ್ರಕರಣದಲ್ಲಿ ಇನ್ನೋರ್ವ ಆರೋಪಿ ಎವಿಜಿನ್ ಜಾನ್ ಡಿಸೋಜ (57) ಎಂಬಾತನನ್ನು 2024ರ ಆಗಸ್ಟ್‌ನಲ್ಲಿ ಬಂಧಿಸಲಾಗಿತ್ತು ಎಂದು ಪೊಲೀಸ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
Mangaluru City Police have arrested a Mumbai native accused of uploading social media posts that promoted feelings of enmity or hatred in 2024. Tulu Times.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











