ಕರ್ನಾಟಕ: Tulu Times | ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರು ನಕಲಿ ವೈದ್ಯರಿಂದ ದೂರವಿರಲು ವೈದ್ಯರಿಗೆ ವೃತ್ತಿ ಪ್ರಮಾಣ ಪತ್ರ, ಕ್ಲಿನಿಕ್ ನೋಂದಣಿ ಕಡ್ಡಾಯಗೊಳಿಸಲಾಗಿದೆ.
ಸರ್ಕಾರದ ಮಾರ್ಗಸೂಚಿಗಳೇನು..?
ಸರ್ಕಾರದ ಮಾರ್ಗಸೂಚಿಗಳ ಅನುಸಾರ ಜಿಲ್ಲೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುವವರು ಕೆಎಯುಪಿ ಮಂಡಳಿ ನೋಂದಣಿ ಪ್ರಮಾಣ ಪತ್ರ ಹಾಗೂ ಕ್ಲಿನಿಕ್‍ಗಳಿಗೆ ಕೆಪಿಎಮ್‍ಇ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ಅನಧಿಕೃತ ವೈದ್ಯ ವೃತ್ತಿ ನಡೆಸುತ್ತಿರುವುದು, ಪರ್ಮಿಶನ್ ಇಲ್ಲದೆ ಟೆಂಟ್ ಹಾಕಿಕೊಂಡು ನಕಲಿ ಔಷಧಿಗಳನ್ನು ಸಾರ್ವಜನಿಕರಿಗೆ ನೀಡುತ್ತಿರುವವರು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ನಕಲಿ ವೈದ್ಯರ ಸಂಖ್ಯೆ ಏರಿಕೆ!
ಜನರು ನಕಲಿ ವೈದ್ಯರಿಂದ ದೂರವಿರಲು ಮತ್ತು ಅರ್ಹ ನೋಂದಾಯಿತ ವೈದ್ಯರಿಂದಲೇ ವೈದ್ಯಕೀಯ ಸೇವೆಯನ್ನು ಪಡೆಯಬೇಕೆಂದು ಧಾರವಾಡ ಜಿಲ್ಲಾ ಆಯುಷ್ ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿ ನಕಲಿ ವೈದ್ಯರ ಸಂಖ್ಯೆ ನಿರಂತರವಾಗಿ ಪತ್ತೆಯಾಗುತ್ತಿದ್ದು, ಆರೋಗ್ಯ ಇಲಾಖೆಯ ಕಾರ್ಯಾಚರಣೆಗಳಲ್ಲಿ 2024-25ನೇ ಸಾಲಿನಲ್ಲಿ ಕನಿಷ್ಠ 256 ನಕಲಿ ವೈದ್ಯರನ್ನು ಪತ್ತೆಹಚ್ಚಲಾಗಿದೆ, ಕ್ಲಿನಿಕ್‌ಗಳನ್ನು ಮುಚ್ಚಲಾಗಿದೆ ಹಾಗೂ ದಂಡ ವಿಧಿಸಲಾಗಿದೆ, ಆದರೆ 2023-24ರಲ್ಲಿ 623 ನಕಲಿ ವೈದ್ಯರು ಪತ್ತೆಯಾಗಿದ್ದು, ಒಟ್ಟು ಸಂಖ್ಯೆ ಇಲಾಖೆಯ ವರದಿಯಂತೆ 1775 ತಲುಪಿದೆ. ಈ ಸಂಖ್ಯೆಗಳು ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಆಧಾರದ ಮೇಲೆ ನಿರಂತರವಾಗಿ ಬದಲಾಗುತ್ತಿವೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಹೋರಿ ಹಬ್ಬಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್
ವರ್ಷಾವಾರು ನಕಲಿ ವೈದ್ಯರ ಸಂಖ್ಯೆಗಳೆಷ್ಟು…?
2023-24 ನೇ ಸಾಲಿನ ಈ ಅವಧಿಯಲ್ಲಿ 623 ನಕಲಿ ವೈದ್ಯರು ಪತ್ತೆಯಾಗಿದ್ದಾರೆ, 193 ಕ್ಲಿನಿಕ್‌ಗಳನ್ನು ಮುಚ್ಚಲಾಗಿದೆ ಮತ್ತು 142 ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ. 2024-25 ನೇ ಸಾಲಿನಲ್ಲಿ ಆರೋಗ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ 256 ನಕಲಿ ವೈದ್ಯರು ಪತ್ತೆಯಾಗಿದ್ದಾರೆ, 89 ಕ್ಲಿನಿಕ್‌ಗಳನ್ನು ಮುಚ್ಚಲಾಗಿದೆ. ಆರೋಗ್ಯ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಒಟ್ಟು 1775 ನಕಲಿ ವೈದ್ಯರು ಇದ್ದಾರೆ ಎಂದು ಹೇಳಲಾಗಿದೆ. ಗಡಿ ಭಾಗದ ಜಿಲ್ಲೆಗಳಾದ ಕಲಬುರಗಿ, ಕೋಲಾರ ಮತ್ತು ಚಾಮರಾಜನಗರದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಆಯುಷ್ ಇಲಾಖೆಯಲ್ಲೂ 833 ಪ್ರಕರಣಗಳು ವರದಿಯಾಗಿವೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಮತ್ತು ಯಾವುದೇ ಅನುಮಾನಾಸ್ಪದ ವೈದ್ಯರ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಇಲಾಖೆ ಮನವಿ ಮಾಡಿದೆ.
Professional certificate mandatory for doctors.. Government considering curbing fake doctors- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











