Udupi: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಉಡುಪಿಯಲ್ಲೂ ಆರ್‌ಟಿಓ ಅಧಿಕಾರಿಯ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಇಂದು ಬೆಳ್ಳಂಬೆಳಗ್ಗೆಯೇ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಆರ್‌ಟಿಓ ಅಧಿಕಾರಿ ಲಕ್ಷ್ಮೀ ನಾರಾಯಣ ಮನೆಯಲ್ಲಿ ಶೋಧ
ಉಡುಪಿಯಲ್ಲಿ ಆರ್‌ಟಿಓ ಅಧಿಕಾರಿಯ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರ್‌ಟಿಓ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ. ನಾಯಕ್ ಎಂಬವರ ಮನೆ, ಕಛೇರಿ ಮೇಲೆ ಈ ದಾಳಿ ನಡೆದಿದ್ದು, ಪರಿಶೀಲನೆ ಮುಂದುವರಿಸಿದ್ದಾರೆ.
ಉಡುಪಿಯ ಕಿನ್ನಿಮೂಲ್ಕಿಯಲ್ಲಿರುವ ಫ್ಲ್ಯಾಟ್ ಹಾಗೂ ಉಡುಪಿಯ ಮಣಿಪಾಲದಲ್ಲಿರುವ ಆರ್‌ಟಿಓ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಿದ್ದಾರೆ.
ಲಕ್ಷ್ಮೀನಾರಾಯಣ ಅವರಿಗೆ ಸೇರಿದ ಮನೆ, ಕಚೇರಿ ಮಾತ್ರವಲ್ಲದೆ ಉಡುಪಿಯ ಪಡು ಅಲೆವೂರು ಮತ್ತು ಕುಮಟಾದಲ್ಲಿರುವ ಸಂಬಂಧಿಕರ ಮನೆಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಲಕ್ಷ್ಮೀ ನಾರಾಯಣ ಅವರ ಆಸ್ತಿ ಮತ್ತು ಆದಾಯದಲ್ಲಿ ಹೊಂದಾಣಿಕೆ ಕಂಡು ಬಾರದ ಹಿನ್ನೆಲೆಯಲ್ಲಿ ದೂರುಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: Pakistan ಪ್ರಧಾನಿ ಮುಂದೆಯೇ ಮೋದಿ ನನ್ನ ಉತ್ತಮ ಸ್ನೇಹಿತ ಎಂದ ಟ್ರಂಪ್
ವಿಡಿಯೋ ಸುದ್ದಿಗಳಿಗಾಗಿ ನಮ್ಮ ಯುಟ್ಯೂಬ್ ಚಾನೆಲ್ ಕ್ಲಿಕ್ ಮಾಡಿ https://www.youtube.com/@tulutimess











