Bagalkote: ರಾಜ್ಯದಲ್ಲಿ ಆರ್‌ಎಸ್‌ಎಸ್ ಬ್ಯಾನ್ ವಿವಾದ ತಾರಕಕ್ಕೇರುವ ಲಕ್ಷಣಗಳು ಕಂಡುಬರುತ್ತಿದೆ. ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ. ಆ ಬಳಿಕ ರಾಜ್ಯದಲ್ಲಿ ಸೈದ್ಧಾಂತಿಕ ಸಂಘರ್ಷಕ್ಕೆ ಸಿಎಂ ಸಿದ್ದರಾಮಯ್ಯ ಸಜ್ಜಾದಂತೆ ಕಾಣಿಸುತ್ತಿದೆ. ಇದೇ ವಿಚಾರ ಬಿಜೆಪಿ-ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ಕಾರಣವಾಗುತ್ತಿದೆ. RSSಗೆ ಕಡಿವಾಣ ಹಾಕಿ ಅಂತ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೆ ಸಮರಕ್ಕೆ ಸಿದ್ದು ಪಂಚೆ ಕಟ್ಟಿದ್ದಾರೆ.
ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ತಮಿಳುನಾಡು ಸರ್ಕಾರದ ನೀತಿಗಳನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ CM ಸಿದ್ದರಾಮಯ್ಯ ಅವರು ಸೋಮವಾರ ಸೂಚನೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ. ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.
ಇದನ್ನೂ ಓದಿ: Udupi: ಆರ್‌ಟಿಓ ಅಧಿಕಾರಿ ಕಛೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ
ವಿಡಿಯೋ ಸುದ್ದಿಗಳಿಗಾಗಿ ನಮ್ಮ ಯುಟ್ಯೂಬ್ ಚಾನೆಲ್ ಕ್ಲಿಕ್ ಮಾಡಿ https://www.youtube.com/@tulutimess











