ಕೊಡಗು: Tulu Times | ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಕೇರಳ ಮೂಲದ ಆರೋಪಿ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ. ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿಗೆ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.
ಬೆಚ್ಚಿಬೀಳಿಸುವ ಪ್ರಕರಣ ಏನು..?
2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನ ನಾಗಿ (35), ಆಕೆಯ ಮಗಳು ಕಾವೇರಿ (7) ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಎಂದು ಗುರುತಿಸಲಾಗಿತ್ತು. ಆರೋಪಿ ಕತ್ತಿಯಿಂದ ನಾಲ್ವರನ್ನೂ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ. ಪ್ರಕರಣದ ಭೀಕರತೆ ಮತ್ತು ಗಂಭೀರತೆಯನ್ನು ಅರಿತ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಿರೀಶ್‌ನನ್ನ ಬಂಧಿಸಿದ್ದರು. ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ವಕೀಲರಾದ ಯಾಸೀನ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಎಲ್ಲಾ ಸಾಕ್ಷ್ಯ ಮತ್ತು ವಾದ-ಪ್ರತಿವಾದ ಪರಿಶೀಲಿಸಿದ ಬಳಿಕ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು, ಆರೋಪಿ ಗಿರೀಶ್‌ನ ಅಪರಾಧವು ಗಂಭೀರ ಸ್ವರೂಪದ್ದು ಎಂದು ಪರಿಗಣಿಸಿ, ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದೇಶದ ಪ್ರಧಾನಿಯನ್ನು ಕೆಟ್ಟ ಪದಗಳಿಂದ ಅವಹೇಳನ ಮೂವರು ಹುಡುಗರ ಬಂಧನ!
ಪ್ರತ್ಯೇಕ ಪ್ರಕರಣದಲ್ಲಿ ಮಡಿಕೇರಿಯ ಸ್ಪೈಸಸ್ ಅಂಗಡಿಯಲ್ಲಿ ಮೂವರು ದೇಶದ ಪ್ರಧಾನಿಗಳಾದ ಮೋದಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇವರ ವಿರುದ್ಧ ಸುಮೊಟೋ ಕೇಶ್ ದಾಖಲಿಸಿ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.
ಮಡಿಕೇರಿಯ ರಾಣಿ ಪೇಟೆಯ ನಿವಾಸಿ ಇಬ್ರಾಹಿಂ ಎಂಬುವರ ಪುತ್ರ ಫಹಾದ್ ಎಮ್ಮ. ಇ, (31) ತ್ಯಾಗರಾಜ ಕಾಲನಿಯ ನಿವಾಸಿ ಹುಸಿನ್ ಎಂಬುವರ ಪುತ್ರ ಬಾಸಿಲ್ ಎಂ ಎಚ್ (29) ಹಾಗೂ ತ್ಯಾಗರಾಜ ಕಾಲೋನಿಯ ನಿವಾಸಿಯಾದ ಮಜಿದ್ ಎಂಬ ಅವರ ಪುತ್ರ ಸಮೀರ್ ಎಂ.ಎಂ (31) ಬಂದಿತ ಆರೋಪಿಗಳಾಗಿದ್ದಾರ.
ಇವರಲ್ಲಿ ಫಹಾದ್ ಎಮ್.ಇ. ಎಂಬುವನು ಸೊಂಟದ ಕೆಳಗಿನ ಭಾಷೆಯನ್ನು ಬಳಸಿ ಯಾವುದೇ ಅಂಜಿಕೆ ಇಲ್ಲದೆ ಈ ದೇಶದ ಪ್ರಧಾನಿಯನ್ನು ನಿಂದಿಸಿ ಹುಚ್ಚಾಟ ಮೆರೆದಿರುವುದನ್ನು ವೀಡಿಯೋದಲ್ಲಿ ನೋಡಿದಾಗ ಅಂಜಿಕೆಯಾಗುತ್ತದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂಥವರನ್ನು ಕೂಡಲೇ ಮಟ್ಟ ಹಾಕದಿದ್ದರೆ ಮುಂದೆ ಸಮಾಜಕ್ಕೆ ದೊಡ್ಡ ಗಂಡಾಂತರವನ್ನು ಇವರು ತಂದುಡ್ಡುವ ಸಾಧ್ಯತೆಯಿದ್ದು, ಯಾವುದೇ ರಾಜಕೀಯವನ್ನು ಬೆರೆಸದೆ, ತಕ್ಕ ಶಿಕ್ಷೆ ಆಗಬೇಕೆಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Court sentences first-time killer of four to death- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











