ಕಾನೂನು : Tulu Times | ನಮ್ಮಲ್ಲಿ ವಾಹನ ಕಳವು ಹಾಗೂ ದರೋಡೆಗಳು ದಿನೇ ದಿನೇ ಹೆಚ್ಚಾಗ್ತಾನೇ ಇದೆ. ಕಾನೂನು ಎಷ್ಟೇ ಮುಂದುವರಿದ್ರೂ ಯಾವುದೇ ತಂತ್ರಜ್ಞಾನ ಇದ್ದರೂ ಕಳವು ಪ್ರಕರಣಗಳು ಮಾತ್ರ ನಿಯಂತ್ರಿಸಲು ಕಷ್ಟ ಆಗ್ತಿದೆ. ಈ ಕಾರಣ ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ನಿಯಮಾನುಸಾರ ಅಗತ್ಯವಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಮೂಲಕ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಅಡ್ಡಿ ಉಂಟಾಗುವಂತೆ ಹಾಗೂ ವಾಹನ ಕಳವು ಪ್ರಕರಣಗಳ ಪತ್ತೆ ಮತ್ತು ತಡೆಗಟ್ಟುವಿಕೆಯಲ್ಲಿ ಪರಿಣಾಮಕಾರಿ ಕ್ರಮ ಜರುಗುವಂತೆ ನೋಡಿಕೊಳ್ಳಲಾಗಿದೆ.
ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ;
ಈ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ಕಳವು ಪ್ರಕರಣಗಳನ್ನು ನಿಯಂತ್ರಿಸಲು ರಾತ್ರಿ ರೌಂಡ್ ಹಾಗೂ ರಸ್ತೆ ಗಸ್ತು ಕರ್ತವ್ಯವನ್ನು ಬಿಗಿಗೊಳಿಸಿ, ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳು, ಕಂಡುಬಂದಲ್ಲಿ ಅಂತಹವರ ವಿಚಾರಣೆಯನ್ನು ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅಧಿಕಾರಿ ಸಿಬ್ಬಂದಿಯವರಿಗೆ ಸೂಚಿಸಲಾಗಿದೆ. ಅಲ್ಲದೇ, ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಆರೋಪಿಗಳ ಮೇಲಿನ ನಿಗಾವನ್ನು ಮತ್ತಷ್ಟು ಬಲಪಡಿಸಲಾಗಿದೆ.
ವಾಹನ ಕಳವು ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಹಾಗೂ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲು ಸಾರ್ವಜನಿಕರಲ್ಲಿ ವಾಹನಗಳನ್ನು ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸುವ ಸಮಯದಲ್ಲಿ ಸರಿಯಾಗಿ ಹ್ಯಾಂಡ್ ಲಾಕ್ ಮಾಡುವಂತೆ ಅರಿವು ಮೂಡಿಸುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇನ್ನು ಸದರಿ ಪ್ರದೇಶದಲ್ಲಿ ಓಡಾಡುವ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆಯನ್ನು ನಡೆಸಿ ಅಪರಾಧಗಳ ಪತ್ತೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸಚಿವರು ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿವರವನ್ನ ಸದನದ ಗಮನಕ್ಕೆ ತರಲಾಯಿತು. ಇದರ ಜೊತೆ ಠಾಣೆಯಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳನ್ನು ಕಳವು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸ್ಥಳಗಳಲ್ಲಿ ರಾತ್ರಿ ತೆರಳಿ ಗಸ್ತು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು. Stricter action to be taken against robbery and vehicle theft – ತುಳು ಟೈಮ್ಸ್
ಇದನ್ನೂ ಓದಿ :ನೀವು ಟ್ರಾವೆಲ್ ಮಾಡುವಾಗ ವಾಂತಿ ಮಾಡುತ್ತೀರಾ..? ಈ ಸ್ಟೋರಿ ಓದಿ!
======
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/zMmTTxS-BuE?si=1yUtHsrxHEvo0JIp











