ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಜನೌಷಧಿ ಮುಚ್ಚುವ ನಿರ್ಧಾರ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : Tulu Times | ಭಾರತ ಸರ್ಕಾರ ಆರಂಭಿಸಿದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆಯು ದೇಶದ ಪ್ರತಿಯೊಬ್ಬ ಸಾಮಾನ್ಯ ಜನರಿಗೆ ಕಡಿಮೆ ಬೆಲೆಯ, ಗುಣಮಟ್ಟದ ಔಷಧಿಯನ್ನು ತಲುಪಿಸುವ ಮಹತ್ವದ ಪ್ರಯತ್ನ ಮಾಡುತ್ತಿದೆ. ಔಷಧಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ನಿಲುವಿನಿಂದ ಈ ಯೋಜನೆ ಪ್ರಾರಂಭಗೊಂಡಿದ್ದು, ಆರೋಗ್ಯ ಸೇವೆಯನ್ನು ಕೈಗೆಟುಕುವ ದರದಲ್ಲಿ ನೀಡುವ ಪ್ರಮುಖ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಚಾರ. ಆದರೆ, ಕೆಲ ಸಮಯದ ಹಿಂದೆ ಇದೇ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸುದ್ದಿಗಳ ಬಗ್ಗೆ ಕೇಳಿರುತ್ತೀರಿ ಆದರೆ ಇದೀಗ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ ಕೇಂದ್ರಗಳನ್ನು ಮುಚ್ಚುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ರದ್ದುಗೊಳಿಸಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ವೈದ್ಯರು ಕೂಡ ಈಗ ಜನೌಷಧಿ ಬಳಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ ;

ಈ ಮೂಲಕ ಬಡವರಿಗೆ ಅಗ್ಗದ ದರದಲ್ಲಿ ಔಷಧಗಳನ್ನು ಪೂರೈಸುವ ಮಹತ್ವದ ಜನೌಷಧಿ ಕೇಂದ್ರಗಳು ಮುಂದುವರಿಯಲು ಅನುಮತಿ ದೊರೆತಂತಾಗಿದ್ದು, ಸರ್ಕಾರದ ಪ್ರಕಾರ, ಜನೌಷಧಿ ಔಷಧಿಗಳು ಅದೇ ಗುಣಮಟ್ಟದ, ಸಮಾನ ಪ್ರಮಾಣದ ರಾಸಾಯನಿಕ ಹೊಂದಿರುತ್ತವೆ. ವೈದ್ಯರು ಕೂಡ ಈಗ ಜನೌಷಧಿ ಬಳಕೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ. ಹಾಗೂ ಇನ್ನು ಮುಂದೆ ಚಿಂತೆಯಿಲ್ಲದೆ ಜನೌಷಧಿ ಕೇಂದ್ರಗಳಿಗೆ ಭೇಟಿ ನೀಡಬಹುದು. ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸರ್ಕಾರಿ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತಿದೆ. ನಮ್ಮ ಕಾನೂನು ಕಚೇರಿಯು ಈ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಈ ಹೋರಾಟವನ್ನು ಯಶಸ್ವಿಯಾಗಿ ಮುನ್ನಡೆಸಿದ ಯುವ ವಕೀಲ ಅನಿರುದ್ಧ ಕುಲಕರ್ಣಿ ಮತ್ತು ಅವರ ತಂಡಕ್ಕೆ ಅಭಿನಂದನೆಗಳು, ಎಂದು ಸಂಸದ ತೇಜಸ್ವಿ ಸೂರ್ಯ ಅವರು ‘X’ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ;

ಬಡವರ ಕೋಟಿ ಕೋಟಿ ರೂ. ಉಳಿತಾಯಕ್ಕೆ ನೆರವು ನೋಡಲಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆ ಅಡಿಯಲ್ಲಿ ದೇಶಾದ್ಯಂತ ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ 10 ವರ್ಷಗಳ ಅವಧಿಯಲ್ಲಿ ಈ ಕೇಂದ್ರಗಳು ಬಡವರಿಗೆ ಕೈಗೆಟುಕುವ ದರದ ಜೆನೆರಿಕ್ ಔಷಧಿಗಳನ್ನು ಒದಗಿಸುವ ಮೂಲಕ ₹ 30,000 ಕೋಟಿಗೂ ಹೆಚ್ಚು ವೈದ್ಯಕೀಯ ವೆಚ್ಚವನ್ನು ಉಳಿಸಲು ಸಹಾಯ ಮಾಡಿವೆ ಎಂದು ತೇಜಸ್ವಿ ಸೂರ್ಯ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನೌಷಧಿ ಯೋಜನೆ ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಕೈಗೂಡಿಸುವ ಮಹತ್ವದ ಹೆಜ್ಜೆ. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ದೊರಕುವಂತೆ ಮಾಡುವ ಮೂಲಕ ಇದು ಸಮಾಜದ ಆರೋಗ್ಯ ರಕ್ಷಣೆಗೆ ಹೊಸ ಬೆಳಕು ತಂದಿರುತ್ತದೆ.

High Court quashes decision to close Janaushadhi – ತುಳು ಟೈಮ್ಸ್

ಇದನ್ನೂ ಓದಿ :ದರೋಡೆ ಹಾಗೂ ವಾಹನ ಕಳ್ಳತನಕ್ಕೆ ಇನ್ನು ಮುಂದೆ ಕಠಿಣ ಕ್ರಮ

=======

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/z7Cg1RxfZUI?si=_td0VgNf95KJtYXF

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page